ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಸತ್ ಕ್ಷೇತ್ರವಾದ ವಾರಣಾಸಿಯಲ್ಲಿ ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿ ಮತ್ತು ಇತರ ಆರೋಗ್ಯ ಕಾರ್ಯಕರ್ತರೊಂದಿಗೆ ಶುಕ್ರವಾರ ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ ಮಾಹಿತಿ ನೀಡಿದೆ.
ಡಿಆರ್‌ಡಿಒ ಮತ್ತು ಭಾರತೀಯ ಸೇನೆಯ ಜಂಟಿ ಪ್ರಯತ್ನಗಳ ಮೂಲಕ ಇತ್ತೀಚೆಗೆ ಪ್ರಾರಂಭವಾದ ಪಂಡಿತ್ ರಾಜನ್ ಮಿಶ್ರಾ ಕೋವಿಡ್ ಆಸ್ಪತ್ರೆ ಸೇರಿದಂತೆ ವಾರಣಾಸಿಯ ವಿವಿಧ ಕೋವಿಡ್ ಆಸ್ಪತ್ರೆಗಳ ಕಾರ್ಯಗಳನ್ನು ಪ್ರಧಾನಿ ಪರಿಶೀಲಿಸಲಿದ್ದಾರೆ ಪ್ರಧಾನಮಂತ್ರಿ ಕಚೇರಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.