ಅಹಮದಾಬಾದ್:ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಕಛ್ಗೆ ಇಂದು ಭೇಟಿ ನೀಡಲಿದ್ದು, ಗುಜರಾತ್‌ನ ಸಿಖ್ ರೈತರನ್ನು ಭೇಟಿಯಾಗಲಿದ್ದಾರೆ.
ಕೆಲವು ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲು ಗುಜರಾತ್‌ನ ಕಛ್ಗೆ ಪ್ರಧಾನಿ ಭೇಟಿ ನೀಡಲಿದ್ದು, ಕಛ್ನಲ್ಲಿರುವ ಧಾರ್ಡೊದ ರೈತರೊಂದಿಗೆ ಸಂವಹನ ನಡೆಸಲಿದ್ದಾರೆ. ಮುಖ್ಯ ಕಾರ್ಯಕ್ರಮದ ಮೊದಲು, ಕಛ್ ಜಿಲ್ಲೆಯ ರೈತರೊಂದಿಗೆ ಚರ್ಚೆ ನಡೆಸಲಿದ್ದಾರೆ. ಇಂಡೋ-ಪಾಕ್ ಗಡಿಯ ಸಮೀಪವಿರುವ ಪ್ರದೇಶಗಳಲ್ಲಿ ನೆಲೆಸಿದ ಸಿಖ್ ರೈತರನ್ನು ಪ್ರಧಾನಮಂತ್ರಿಯೊಂದಿಗೆ ಸಂವಹನ ನಡೆಸಲು ಆಹ್ವಾನಿಸಲಾಗಿದೆ ಎಂದು ರಾಜ್ಯ ಸರ್ಕಾರದ ಮಾಹಿತಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಧಾನಿ ಭೇಟಿ ಹಿನ್ನೆಲೆ ಕಛ್ನಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ.
ರಾಜ್ಯ ಮಾಹಿತಿ ಇಲಾಖೆ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯ ಪ್ರಕಾರ, ಇಂಡೋ-ಪಾಕ್ ಗಡಿಯ ಸಮೀಪವಿರುವ ಸಿಖ್ ರೈತರನ್ನು ಪ್ರಧಾನ ಮಂತ್ರಿಯೊಂದಿಗೆ ಸಂವಹನ ನಡೆಸಲು ಆಹ್ವಾನಿಸಲಾಗಿದೆ. ಕಛ್ ಜಿಲ್ಲೆಯ ಲಖಪತ್ ತಾಲೂಕಿನಲ್ಲಿ ಮತ್ತು ಸುತ್ತಮುತ್ತ ಸುಮಾರು 5,000 ಸಿಖ್ ಕುಟುಂಬಗಳು ವಾಸಿಸುತ್ತಿವೆ. ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಸಾವಿರಾರು ರೈತರು ಕಳೆದ 19 ದಿನಗಳಿಂದ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರಲ್ಲಿ ಪಂಜಾಬ್ ರೈತರು ಕಳೆದೆರಡು ತಿಂಗಳಿನಿಂದ ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ. ಈ ಮಧ್ಯೆ ಸಿಖ್ ರೈತರೊಂದಿಗಿನ ಮೋದಿಯ ಚರ್ಚೆ ಭಾರಿ ಕುತೂಹಲ ಮೂಡಿಸಿದೆ.
ಕಛ್ನಲ್ಲಿ ಇಂದಿನ ಪ್ರಧಾನಿ ಮೋದಿ ಕಾರ್ಯಕ್ರಮಗಳು: