ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದು, ಮಧ್ಯಾಹ್ನ 1 ಗಂಟೆಗೆ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಮೀರತ್‌ನ ಸರ್ಧಾನ ಪಟ್ಟಣದ ಸಲಾವಾ ಮತ್ತು ಕೈಲಿ ಗ್ರಾಮಗಳ ಸಮೀಪದಲ್ಲಿ ಸುಮಾರು 700 ಕೋಟಿ ರೂಪಾಯಿ ವೆಚ್ಚದಲ್ಲಿ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನಮಂತ್ರಿ ಕಚೇರಿ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಕ್ರೀಡಾ ಸಂಸ್ಕೃತಿಯನ್ನು ಬೆಳೆಸುವುದು ಮತ್ತು ದೇಶದ ಎಲ್ಲಾ ಭಾಗಗಳಲ್ಲಿ ವಿಶ್ವ ದರ್ಜೆಯ ಕ್ರೀಡಾ ಮೂಲಸೌಕರ್ಯ ಸ್ಥಾಪಿಸುವುದು ಪ್ರಧಾನಿಮಂತ್ರಿಗಳ ಆದ್ಯತೆಯಾಗಿದೆ. ಮೀರತ್‌ನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪನೆಯು ಇದೇ ಉದ್ದೇಶವನ್ನು ಹೊಂದಿದೆ ಎಂದು ಪ್ರಧಾನಿ ಕಚೇರಿ ಹೇಳಿದೆ.