ಕರ್ನಾಟಕ

karnataka

ETV Bharat / bharat

ಕೋವಿಡ್‌ ವಿರುದ್ಧದ ಹೋರಾಟಕ್ಕೆ 4 'ಟಿ' ತಂತ್ರ ಅನುಸರಿಸಿ: ಮೋದಿ ಸೂಚನೆ - ಕೋವಿಡ್‌-19

ಹಲವು ನಿರ್ಬಂಧಗಳು ಹಾಗೂ ಲಸಿಕಾ ಅಭಿಯಾನ ನಡೆಯುತ್ತಿದ್ದರೂ ಇನ್ನೂ ಕೆಲ ರಾಜ್ಯಗಳಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇಂದು 6 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದು, 4 ಟಿ ತಂತ್ರ ಪಾಲಿಸುವಂತೆ ಸೂಚನೆ ನೀಡಿದ್ದಾರೆ.

PM Modi to meet chief ministers of six states, review Covid-19 situation
ಕೋವಿಡ್‌ ವಿರುದ್ಧದ ಹೋರಾಟಕ್ಕೆ 4 'ಟಿ' ತಂತ್ರ ಅನುಸರಿಸಿ: ಸಿಎಂಗಳಿಗೆ ಪ್ರಧಾನಿ ಮೋದಿ ಸೂಚನೆ

By

Published : Jul 16, 2021, 3:39 PM IST

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು 6 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವರ್ಚುವಲ್‌ ಸಭೆ ನಡೆಸಿದರು. ಈ ವೇಳೆ ಕೋವಿಡ್‌ ಪ್ರಕರಣಗಳನ್ನು ಕಡಿಮೆ ಮಾಡಲು ಟೆಸ್ಟ್‌-ಟ್ರ್ಯಾಕ್‌-ಟ್ರೀಟ್‌-ಟಿಕಾ ಎಂಬ ನಾಲ್ಕು 'ಟಿ' ಮಂತ್ರಗಳನ್ನು ಪ್ರಸ್ತಾಪಿಸಿದ್ದಾರೆ. ಕೆಲವು ರಾಜ್ಯಗಳಲ್ಲಿ ಇನ್ನೂ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವುದು ಗಂಭೀರ ವಿಷಯ ಎಂದು ಮೋದಿ ಕಳವಳ ವ್ಯಕ್ತಪಡಿಸಿದರು.

6 ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ

ಕರ್ನಾಟಕ, ಮಹಾರಾಷ್ಟ್ರ, ಕೇರಳ, ತಮಿಳುನಾಡು, ಆಂಧ್ರ ಪ್ರದೇಶ ಹಾಗೂ ಒಡಿಶಾ ರಾಜ್ಯಗಳು ಮುಖ್ಯಮಂತ್ರಿಗಳೊಂದಿಗೆ ಅವರು ಸಭೆ ನಡೆಸಿದರು. ಮಹಾಮಾರಿ ವಿರುದ್ಧ ಹೋರಾಡಲು ಬೇಕಿರುವ ಮಾರ್ಗ ಸೂಚಿಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಮೈಕ್ರೋ ಕಂಟೈನ್ಮೆಂಟ್‌ ಜೋನ್‌ಗಳ ಮೇಲೆ ಹೆಚ್ಚು ಗಮನ ಹರಿಸಬೇಕು ಎಂದು ಇದೇ ವೇಳೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಆರೋಗ್ಯ ಮೂಲಸೌಕರ್ಯ ಬಲಪಡಿಸಲು ಕ್ರಮ: 23 ಸಾವಿರ ಕೋಟಿ ಪರಿಹಾರ ಘೋಷಿಸಿದ ಕೇಂದ್ರ

ಎಲ್ಲರ ಸಹಕಾರದಿಂದ ಒಗ್ಗಟ್ಟಾಗಿ ಇಡೀ ದೇಶ ಕೋವಿಡ್ ವಿರುದ್ಧ ಹೋರಾಟ ಮಾಡುತ್ತಿದೆ. ಕೊರೊನಾ 3ನೇ ಅಲೆಯ ಭೀತಿ ಶುರುವಾಗಿದೆ. ಕೆಲ ರಾಜ್ಯಗಳಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಲೇ ಇರುವುದು ಕಳವಳಕಾರಿ ಎಂದಿದ್ದಾರೆ. ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಇಂದಿಗೂ ಪ್ರಕರಣಗಳು ಹೆಚ್ಚಾಗುತಲ್ಲೇ ಇವೆ. ಕೋವಿಡ್‌ ಪರೀಕ್ಷೆ ಹಾಗೂ ವ್ಯಾಕ್ಸಿನ್‌ ಅಭಿಯಾನವನ್ನು ಹೆಚ್ಚಿಸುವಂತೆ ಈ ರಾಜ್ಯಗಳು ಮುಖ್ಯಮಂತ್ರಿಗಳಿಗೆ ಸೂಚಿಸಿದರು.

ಕಳೆದ ಒಂದು ವಾರದಿಂದ ಇಲ್ಲಿ 80 ರಷ್ಟು ಹೊಸ ಕೋವಿಡ್‌ ಪ್ರಕರಣಗಳು ಹಾಗೂ 84 ರಷ್ಟು ಸಾವಿನ ಪ್ರಮಾಣವಿದೆ. ವೈರಸ್‌ ವಿರುದ್ಧ ಸಮರದಲ್ಲಿ ಟೆಸ್ಟ್‌, ಟ್ರ್ಯಾಕ್‌, ಟ್ರೀಟ್‌ ಮತ್ತು ಟಿಕಾ (ವ್ಯಾಕ್ಸಿನ್‌) ತಂತ್ರಗಳನ್ನು ಅಳವಡಿಸಿಕೊಳ್ಳುವಂತೆ ಒತ್ತಿ ಹೇಳಿದ್ದಾರೆ.

ABOUT THE AUTHOR

...view details