ನವದೆಹಲಿ: ಶ್ರೀಮದ್ ಭಗವದ್ಗೀತೆಯ ಶ್ಲೋಕಗಳ ಕುರಿತು 21 ವಿದ್ವಾಂಸರ ವ್ಯಾಖ್ಯಾನಗಳೊಂದಿಗೆ 11 ಸಂಪುಟಗಳ ಹಸ್ತಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಮಾರ್ಚ್ 9ರಂದು ತಮ್ಮ ನಿವಾಸದಲ್ಲಿ ಬಿಡುಗಡೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ವೇಳೆ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಹಿಂದೂ ಧರ್ಮಶಾಸ್ತ್ರದ ವಿದ್ವಾಂಸರೂ ಆಗಿರುವ ಹಿರಿಯ ಕಾಂಗ್ರೆಸ್ ಮುಖಂಡ ಕರಣ್ ಸಿಂಗ್ ಭಾಗಿಯಾಗಲಿದ್ದಾರೆ ಎಂದು ಪಿಎಂಒ ತಿಳಿಸಿದೆ.