ನವದೆಹಲಿ: ದೇಶದಲ್ಲಿ ಮತ್ತೆ ಕೊರೊನಾ ವೈರಸ್ ಪ್ರಕರಣಗಳ ಏರಿಕೆ ಆಗುತ್ತಿರುವ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿ ಈಗಿನ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹರಿಯಾಣ, ದೆಹಲಿ, ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ ಮತ್ತು ಕೇರಳದ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ವರ್ಚ್ಯುವಲ್ ಸಭೆ ನಡೆಸಲಿದ್ದಾರೆ. ಈ ಸಭೆಯ ನಂತರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಲಸಿಕೆ ವಿತರಣೆಯ ಪೂರ್ವಭಾವಿ ಕಾರ್ಯಕ್ರಮ ಕುರಿತು ಚರ್ಚಿಸಲಿದ್ದಾರೆ.