ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ಜನಪ್ರಿಯ ರೇಡಿಯೊ ಕಾರ್ಯಕ್ರಮ 'ಮನ್ ಕಿ ಬಾತ್'ನಲ್ಲಿ ದೇಶದ ಜನರೊಂದಿಗೆ ಸರ್ಕಾರ ಮತ್ತು ತಮ್ಮ ಆಶಯಗಳನ್ನು ಇಂದು ಬೆಳಗ್ಗೆ 11 ಗಂಟೆಗೆ ಹಂಚಿಕೊಳ್ಳಲಿದ್ದಾರೆ. ಇದು ಮಾಸಿಕ ಕಾರ್ಯಕ್ರಮದ 91ನೇ ಸಂಚಿಕೆ. ಕಾರ್ಯಕ್ರಮವನ್ನು ಆಲ್ ಇಂಡಿಯಾ ರೇಡಿಯೋ ಮತ್ತು ದೂರದರ್ಶನ, ಎಐಆರ್ ನ್ಯೂಸ್ ವೆಬ್‌ಸೈಟ್ ಮತ್ತು ನ್ಯೂಸ್‌ಏರ್ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ.
ಪ್ರಧಾನಿ ಮೋದಿ 'ಮನ್ ಕಿ ಬಾತ್': ಬೆಳಗ್ಗೆ 11 ಗಂಟೆಗೆ ಪ್ರಸಾರ - ಪ್ರಧಾನಿ ಮೋದಿ ಭಾಷಣ
91ನೇ ಆವೃತ್ತಿಯ 'ಮನ್ ಕಿ ಬಾತ್'ನಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡುವರು.
ಪ್ರಧಾನಿ ನರೇಂದ್ರ ಮೋದಿ
ಪಿಎಂಒ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಯೂಟ್ಯೂಬ್ ಚಾನೆಲ್‌ಗಳಲ್ಲೂ ನೇರ ಪ್ರಸಾರವಿರಲಿದೆ. ಹಿಂದಿ ಭಾಷೆಯಲ್ಲಿ ಪ್ರಸಾರದ ನಂತರ ತಕ್ಷಣ ಪ್ರಾದೇಶಿಕ ಭಾಷೆಗಳಲ್ಲಿ ಕಾರ್ಯಕ್ರಮವನ್ನು ಆಲ್ ಇಂಡಿಯಾ ರೇಡಿಯೋ ಪ್ರಸಾರ ಮಾಡುತ್ತದೆ. ಪ್ರಾದೇಶಿಕ ಭಾಷೆಯ ಆವೃತ್ತಿಗಳನ್ನು ರಾತ್ರಿ 8 ಗಂಟೆಗೆ ಪುನರಾವರ್ತಿಸಲಾಗುತ್ತದೆ.
ಇದನ್ನೂ ಓದಿ:ಗುಜರಾತ್ನಲ್ಲಿ ಪ್ರಧಾನಿ ಮೋದಿ: ಸಬರ್ ಡೈರಿಯಲ್ಲಿ ಒಂದು ಸಾವಿರ ಕೋಟಿ ವೆಚ್ಚದ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ
Last Updated : Jul 31, 2022, 8:10 AM IST