ನವದೆಹಲಿ :ಬೆಳಗ್ಗೆ 11 ಗಂಟೆಗೆ 'ಮನ್ ಕಿ ಬಾತ್' ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.
ಪ್ರಧಾನಿ ಮೋದಿಯಿಂದ 71 ನೇ ಆವೃತ್ತಿಯ 'ಮನ್ ಕಿ ಬಾತ್' - ಮನ್ ಕಿ ಬಾತ್ 71 ನೇ ಸಂಚಿಕೆ
ಬೆಳಗ್ಗೆ 11ಗಂಟೆಗೆ ಪ್ರಧಾನಿ ಮೋದಿಯಿಂದ 'ಮನ್ ಕಿ ಬಾತ್' ಕಾರ್ಯಕ್ರಮ ನಡೆಯಲಿದೆ.
ಇಂದು ಪ್ರಧಾನಿ ಮನ್ ಕಿ ಬಾತ್
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, 71 ನೇ ಆವೃತ್ತಿಯ ಮನ್ ಕಿ ಬಾತ್ ಕಾರ್ಯಕ್ರಮ ಇಂದು ನಡೆಯಲಿದ್ದು, ಆಕಾಶವಾಣಿ ಮತ್ತು ದೂರದರ್ಶನದಲ್ಲಿ ಪ್ರಸಾರವಾಗಲಿದೆ. ಜೊತೆಗೆ ಪ್ರಧಾನ ಮಂತ್ರಿ ಕಾರ್ಯಾಲಯ, ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಯೂಟ್ಯೂಬ್ ಚಾನಲ್‌ಗಳಲ್ಲಿಯೂ ನೇರ ಪ್ರಸಾರ ಇರಲಿದೆ ಎಂದು ತಿಳಿಸಿದ್ದಾರೆ.
ಪ್ರತಿ ತಿಂಗಳ ಕೊನೆಯ ಭಾನುವಾರ ಪ್ರಧಾನ ಮಂತ್ರಿಗಳ ಮನ್ ಕಿ ಬಾತ್ ಕಾರ್ಯಕ್ರಮ ಪ್ರಸಾರವಾಗುತ್ತಿದ್ದು, ಇತ್ತೀಚಿನ ವಿಷಯಗಳ ಕುರಿತು ಪ್ರಧಾನಿ ಮಾತನಾಡಲಿದ್ದಾರೆ.