ನವದೆಹಲಿ: ಇಂದು ಬ್ರಿಕ್ಸ್ ದೇಶಗಳ 13ನೇ ಶೃಂಗಸಭೆ ನಡೆಯಲಿದ್ದು, ವರ್ಚುಯಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ಭಾರತ, 2021ರ ಬ್ರಿಕ್ಸ್ ದೇಶಗಳ ಸಮಾವೇಶದ ಅಧ್ಯಕ್ಷತೆ ವಹಿಸಿದೆ.
ಈ ಸಭೆಯಲ್ಲಿ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ, ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್, ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಹಾಗೂ ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಫೋಸಾ ಪಾಲ್ಗೊಳ್ಳಲಿದ್ದಾರೆ.
ಸಮಾವೇಶದ ಅಧ್ಯಕ್ಷತೆ ವಹಿಸಿರುವ ಭಾರತ, ಬಹುಪಕ್ಷೀಯ ವ್ಯವಸ್ಥೆಯ ಸುಧಾರಣೆ, ಭಯೋತ್ಪಾದನೆ ನಿಗ್ರಹ, ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆಗೆ ಡಿಜಿಟಲ್ ಮತ್ತು ತಂತ್ರಜ್ಞಾನ ಸಾಧನಗಳ ಬಳಕೆಗೆ ಒತ್ತು ನೀಡಲಿದೆ. ಅಫ್ಘಾನಿಸ್ತಾನದ ಇತ್ತೀಚಿನ ಪರಿಸ್ಥಿತಿಯನ್ನು ಕುರಿತು ಈ ಸಭೆಯಲ್ಲಿ ಚರ್ಚಿಸುವ ನಿರೀಕ್ಷೆಯಿದೆ.