ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 29 ರಿಂದ ನವೆಂಬರ್ 2 ರವರೆಗೆ ಇಟಲಿ ಮತ್ತು ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದಾರೆ. ಇಟಲಿಯ ರಾಜಧಾನಿ ರೋಮ್ನಲ್ಲಿ ಇದೇ 30 ರಿಂದ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಆಫ್ಘನ್ ಬಿಕ್ಕಟ್ಟು, ಹವಾಮಾನ ಬದಲಾವಣೆ, ಕೋವಿಡ್ ಪಿಡುಗಿನ ಸವಾಲುಗಳನ್ನು ಎದುರಿಸುವ ಕುರಿತು ಮಾತನಾಡಲಿದ್ದಾರೆ.
ಈ ವೇಳೆ ಪ್ರಧಾನಿಯವರು ಹಲವು ರಾಷ್ಟ್ರಗಳ ಮುಖ್ಯಸ್ಥರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ದ್ವಿಪಕ್ಷೀಯ ಸಮಸ್ಯೆಗಳ ಬಗ್ಗೆ ಚರ್ಚಿಸಲು ಪ್ರಧಾನ ಮಂತ್ರಿ ಇಟಲಿ ಪ್ರಧಾನಿ ಮಾರಿಯೋ ಡ್ರಾಗಿ ಅವರನ್ನು ಭೇಟಿ ಮಾಡಲಿದ್ದಾರೆ.