ನವದೆಹಲಿ: ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ದೇಶಾದ್ಯಂತ ಗ್ರಾಮಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 20,000 ಕೋಟಿಗೂ ಅಧಿಕ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಹಾಗೆಯೇ, ಈ ವೇಳೆ ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯತ್‌ಗೆ ಪ್ರಧಾನಿ ಭೇಟಿ ನೀಡಲಿದ್ದಾರೆ.
ಜಲಮೂಲಗಳ ಪುನರುಜ್ಜೀವನವನ್ನು ಖಾತ್ರಿಪಡಿಸುವ ಉದ್ದೇಶದಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಪ್ರಧಾನಿಯವರು ಅಮೃತ್ ಸರೋವರ ಎಂಬ ಹೊಸ ಉಪಕ್ರಮವನ್ನು ಪ್ರಾರಂಭಿಸಲಿದ್ದಾರೆ. ಇದು ದೇಶದ ಪ್ರತಿ ಜಿಲ್ಲೆಯಲ್ಲಿ 75 ಜಲಮೂಲಗಳನ್ನು ಅಭಿವೃದ್ಧಿಪಡಿಸುವ ಮತ್ತು ಪುನರುಜ್ಜೀವನಗೊಳಿಸುವ ಗುರಿ ಹೊಂದಿದೆ.