ನವದೆಹಲಿ :ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿರುವ ನೀರಜ್ ಚೋಪ್ರಾ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ವಿವಿಧ ಕ್ಷೇತ್ರಗಳ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ನೀರಜ್ ಜೋಪ್ರಾಗೆ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ ಅಭಿನಂದನೆ
ಜರ್ಮನಿಯ ಟೋಕಿಯೊದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದು ಐತಿಹಾಸಿಕ ಸಾಧನೆ ಮಾಡಿರುವ ನೀರಜ್ ಜೋಪ್ರಾಗೆ ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ. ಚೋಪ್ರಾ ಅವರ ಸಾಧನೆಯನ್ನು ನಾಯಕರು ಕೊಂಡಾಡಿದ್ದಾರೆ..
ನೀರಜ್ ಚೋಪ್ರಾ ಅಭೂತಪೂರ್ವ ಗೆಲುವು! ನಿಮ್ಮ ಜಾವೆಲಿನ್ ಚಿನ್ನವು ಅಡೆತಡೆಗಳನ್ನು ಮುರಿದು ಇತಿಹಾಸ ಸೃಷ್ಟಿಸಿದೆ. ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಟ್ರ್ಯಾಕ್ ಮತ್ತು ಫೀಲ್ಡ್‌ನಲ್ಲಿ ಮೊದಲ ಪದಕವನ್ನು ನೀವು ಮನೆಗೆ ತರುತ್ತೀರಿ. ನಿಮ್ಮ ಸಾಧನೆ ನಮ್ಮ ಯುವಕರಿಗೆ ಸ್ಫೂರ್ತಿ ನೀಡುತ್ತದೆ. ಭಾರತ ಸಂಭ್ರಮಿಸಿದೆ. ಹೃತ್ಪೂರ್ವಕ ಅಭಿನಂದನೆಗಳು ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ಟೋಕಿಯೊದಲ್ಲಿ ಇತಿಹಾಸವನ್ನು ಸೃಷ್ಟಿಸಲಾಗಿದೆ. ಇಂದು ನೀರಜ್ ಚೋಪ್ರಾ ಸಾಧಿಸಿರುವುದು ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತದೆ. ಯುವಕ ನೀರಜ್ ಅಸಾಧಾರಣವಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಅವರು ಗಮನಾರ್ಹವಾದ ಉತ್ಸಾಹದಿಂದ ಆಡಿದರು. ಅಪ್ರತಿಮ ಮನೋಭಾವವನ್ನು ತೋರಿಸಿದರು. ಚಿನ್ನ ಗೆದ್ದ ಅವರಿಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.