ಕರ್ನಾಟಕ

karnataka

ETV Bharat / bharat

'ಆದಷ್ಟು ಬೇಗ ಚೇತರಿಸಿಕೊಳ್ಳಿ': ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ಗೆ ನಮೋ ವಿಶ್​​​ - ಪಾಕ್​ ಪ್ರಧಾನಿಗೆ ಕೊರೊನಾ ಸೋಂಕು

ಲಸಿಕೆ ಪಡೆದುಕೊಂಡ ಮರುದಿನವೇ ಪಾಕ್​ ಪ್ರಧಾನಿ ಇಮ್ರಾನ್ ಖಾನ್​ಗೆ ಕೊರೊನಾ ತಗುಲಿರುವುದು ದೃಢಪಟ್ಟಿದ್ದು, ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

PM Modi tweets
PM Modi tweets

By

Published : Mar 20, 2021, 8:24 PM IST

ನವದೆಹಲಿ:ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ಗೆ ಮಹಾಮಾರಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಆದಷ್ಟು ಬೇಗ ಗುಣಮುಖರಾಗುವಂತೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಎರಡು ದಿನದ ಹಿಂದೆ ಲಸಿಕೆ ಪಡೆದಿದ್ದ ಪಾಕ್‌ ಪಿಎಂ ಇಮ್ರಾನ್​ ಖಾನ್​ಗೆ ಕೊರೊನಾ ದೃಢ

ನಿನ್ನೆ ಕೋವಿಡ್​ ಲಸಿಕೆ ಪಡೆದುಕೊಂಡಿದ್ದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್​ಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದ್ದು, ಸದ್ಯ ಹೋಮ್​ ಐಸೋಲೇಶನ್​​ನಲ್ಲಿದ್ದುಕೊಂಡು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಜತೆಗೆ ದೇಶದ ಜನತೆ ಲಸಿಕೆ ಪಡೆಯುವಂತೆ ಸಲಹೆ ನೀಡಿದ್ದಾರೆ.

ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿರುವ ಮಾಹಿತಿ ಬಹಿರಂಗವಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮಾಡಿದ್ದು, ಆದಷ್ಟು ಬೇಗ ಚೇತರಿಸಿಕೊಳ್ಳುವಂತೆ ಹಾರೈಸಿದ್ದಾರೆ.

ABOUT THE AUTHOR

...view details