ನವದೆಹಲಿ :ಹನುಮ ಜಯಂತಿ ಹಿನ್ನೆಲೆ ಪ್ರಧಾನಿ ಮೋದಿ ಅವರು ಗುಜರಾತ್ನ ಮೊರ್ಬಿಯಲ್ಲಿ 108 ಅಡಿ ಎತ್ತರದ ಹನುಮಾನ್ ಪ್ರತಿಮೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟನೆ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಪ್ರಧಾನಮಂತ್ರಿ ಕಚೇರಿ, 'ಹನುಮಾನ್ಜಿ ಚಾರ್ಧಾಮ್' ಪ್ರಾಜೆಕ್ಟ್ನ ಅಡಿಯಲ್ಲಿ ದೇಶದ ನಾಲ್ಕು ದಿಕ್ಕುಗಳಲ್ಲಿ ನಿರ್ಮಾಣ ಮಾಡಲಾಗುತ್ತಿರುವ ನಾಲ್ಕು ಹನುಮಾನ್ ಪ್ರತಿಮೆಗಳಲ್ಲಿ ಇದು ಎರಡನೇಯದು ಎಂದು ಸ್ಪಷ್ಟಪಡಿಸಿದೆ.
ಕೆಲವು ವರ್ಷಗಳ ಹಿಂದೆ ಶಿಮ್ಲಾದಲ್ಲಿ ಇದೇ ರೀತಿಯ ಭವ್ಯವಾದ ಹನುಮಾನ್ ಪ್ರತಿಮೆಯನ್ನು ಅನಾವರಣಗೊಳಿಸಿದ್ದೆವು. ಎರಡನೇ ಪ್ರತಿಮೆಯನ್ನು ಇಂದು ಮೊರ್ಬಿಯಲ್ಲಿ ಸ್ಥಾಪಿಸಲಾಗಿದೆ. ರಾಮೇಶ್ವರಂ ಮತ್ತು ಪಶ್ಚಿಮ ಬಂಗಾಳದಲ್ಲಿ ಇನ್ನೂ ಎರಡು ಪ್ರತಿಮೆಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದರು. ಮೊರ್ಬಿಯಲ್ಲಿರುವ ಬಾಪು ಕೇಶವಾನಂದಜೀ ಅವರ ಆಶ್ರಮದಲ್ಲಿ ಪಶ್ಚಿಮದಲ್ಲಿ ಪ್ರತಿಮೆಯನ್ನು ಸ್ಥಾಪಿಸಲಾಗಿದೆ.