ನವದೆಹಲಿ:ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ಮೋದಿ ಅವರು ಇಂಧನದ ಮೇಲಿನ ತೆರಿಗೆಯನ್ನು ಕಡಿತಗೊಳಿಸುವಂತೆ ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದ್ದು, ಕೆಲವೇ ದಿನಗಳಲ್ಲಿ ತೈಲ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ.
ಪೆಟ್ರೋಲ್ - ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಿ: ರಾಜ್ಯಗಳಿಗೆ ಪ್ರಧಾನಿ ಒತ್ತಾಯ - ರಾಜ್ಯಗಳಿಗೆ ಪ್ರಧಾನಿ ಮೋದಿ ಒತ್ತಾಯ
ಇಂಧನದ ಮೇಲಿನ ತೆರಿಗೆಯನ್ನು ಕಡಿತಗೊಳಿಸುವಂತೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಭಾಗಿಯಾಗಿದ್ದ ಕೋವಿಡ್ ಪರಿಶೀಲನಾ ಸಭೆಯಲ್ಲಿ ಪ್ರಧಾನಿ ಮೋದಿ ರಾಜ್ಯಗಳನ್ನು ಒತ್ತಾಯಿಸಿದ್ದಾರೆ.
ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಭಾಗಿಯಾಗಿದ್ದ ಕೋವಿಡ್ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಏರಿಕೆಯಿಂದ ಕಂಗಾಲಾಗಿರುವ ನಾಗರಿಕರ ಪರವಾಗಿ ನಿಲ್ಲುವಂತೆ ರಾಜ್ಯಗಳನ್ನು ಒತ್ತಾಯಿಸಿದ್ದಾರೆ. ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ತೆಲಂಗಾಣದಂತಹ ರಾಜ್ಯಗಳು ಇಂಧನದ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿಲ್ಲ ಎಂದಿರುವ ಅವರು ಕೇಂದ್ರವು ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ಕೆಲವು ರಾಜ್ಯಗಳು ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತಗೊಳಿಸಲಿಲ್ಲ. ಇದರಿಂದ ಜನರಿಗೆ ಅನ್ಯಾಯವಾಗಿದೆ ಎಂದಿದ್ದಾರೆ.
ಇದನ್ನೂ ಓದಿ:ಹೇಟ್ - ಇನ್ - ಇಂಡಿಯಾ - ಮೇಕ್-ಇನ್-ಇಂಡಿಯಾ ಸಹಬಾಳ್ವೆ ಸಾಧ್ಯವಿಲ್ಲ: ರಾಹುಲ್ ಗಾಂಧಿ