ನವದೆಹಲಿ: ಮುಖ್ಯಮಂತ್ರಿ ಬಿಎಸ್ ಯಡಿಯುರಪ್ಪ ಸೇರಿದಂತೆ ದಕ್ಷಿಣ ರಾಜ್ಯಗಳ ಆರು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಸಭೆ ನಡೆಸಲಿದ್ದಾರೆ. ಈ ವೇಳೆ ರಾಜ್ಯಗಳಲ್ಲಿ ಕೊರೊನಾ ಪರಿಸ್ಥಿತಿ ಹಾಗೂ ಲಸಿಕೆ ಹಂಚಿಕೆ ಹಾಗೂ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ತಮಿಳುನಾಡು, ಆಂಧ್ರಪ್ರದೇಶ, ಕೇರಳ, ಒಡಿಶಾ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳು ಮೋದಿ ಸಭೆಯಲ್ಲಿ ಭಾಗಿಯಾಗಲಿದ್ದು, ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದ್ದಾರೆ. ಪ್ರಮುಖವಾಗಿ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಹಾವಳಿ ಜೋರಾಗಿದ್ದು, ಮತ್ತಷ್ಟು ಸೂಚನೆ ನೀಡುವ ಸಾಧ್ಯತೆ ಇದೆ. ಇದರ ಮಧ್ಯೆ ಕೇರಳದಲ್ಲಿ ಝಿಕಾ ವೈರಸ್ ಹಾವಳಿ ಕಂಡು ಬಂದಿರುವ ಕಾರಣ ಮೋದಿ ಮಹತ್ವದ ವಿಷಯ ಹಂಚಿಕೊಳ್ಳುವ ನಿರೀಕ್ಷೆ ಇದೆ.