ಜಮ್ಮು- ಕಾಶ್ಮೀರ:370ನೇ ವಿಧಿ ರದ್ದಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕೇಂದ್ರಾಡಳಿತ ಪ್ರದೇಶವಾದ ಜಮ್ಮು- ಕಾಶ್ಮೀರಕ್ಕೆ ಭೇಟಿ ನೀಡಿದರು. ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಮ್ಮು -ಕಾಶ್ಮೀರದಲ್ಲಿ ಪ್ರಜಾಪ್ರಭುತ್ವ ಆಳವಾಗಿ ಬೇರೂರಿದೆ. ಅದನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಇಲ್ಲಿನ ಯುವಜನತೆ ಅವರ ಪೂರ್ವಿಕರು ಪಟ್ಟ ಕಷ್ಟಗಳನ್ನು ಅನುಭವಿಸಬಾರದು. ಅವರಿಗೆ ಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸಿಕೊಡಲು ಸರ್ಕಾರ ಸಿದ್ಧವಿದೆ ಎಂದು ಭರವಸೆ ನೀಡಿದರು.
ಈ ಬಾರಿ ಪಂಚಾಯತ್ ರಾಜ್ ದಿನವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಆಚರಿಸಲಾಗುತ್ತಿದೆ. ಇದು ದೊಡ್ಡ ಬದಲಾವಣೆಯನ್ನು ಸೂಚಿಸುತ್ತದೆ. ಇಲ್ಲಿನ ಪ್ರಜಾಪ್ರಭುತ್ವವು ತಳಮಟ್ಟದಲ್ಲಿ ಬೆಳೆದಿದೆ ಎಂಬುದು ಹೆಮ್ಮೆಯ ವಿಷಯ. ಅದಕ್ಕಾಗಿಯೇ ನಾನು ಇಲ್ಲಿಂದಲೇ ದೇಶದಾದ್ಯಂತ ಇರುವ ಪಂಚಾಯತ್‌ಗಳೊಂದಿಗೆ ಸಂವಹನ ನಡೆಸುತ್ತಿದ್ದೇನೆ ಎಂದರು.
ಕೇಂದ್ರಾಡಳಿತ ಪ್ರದೇಶ ಅಭಿವೃದ್ಧಿಯ ಹೊಸ ಶಕೆಯನ್ನು ಬರೆಯಲು ಸಜ್ಜಾಗಿದೆ. ಸ್ವಾತಂತ್ರ್ಯ ಬಂದ 7 ದಶಕಗಳ ಅವಧಿಯಲ್ಲಿ ಇಲ್ಲಿ ಕೇವಲ 17,000 ಕೋಟಿ ರೂಪಾಯಿ ಖಾಸಗಿ ಹೂಡಿಕೆಯನ್ನು ಮಾತ್ರ ಮಾಡಲಾಗಿತ್ತು. ಇದೀಗ ಅದು 38,000 ಕೋಟಿಗೆ ತಲುಪಿದೆ. ಇದು ಇಲ್ಲಿನ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಪ್ರಧಾನಿ ಹೇಳಿದರು.