ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ಮತ್ತು ಪ್ರಸ್ತುತ ಸ್ಥಿತಿಯ ಕುರಿತು ನೇರ ಪ್ರತಿಕ್ರಿಯೆ ಪಡೆಯಲು ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ (DMs) ಸಂವಾದ ನಡೆಸಲಿದ್ದಾರೆ. ಇಂದು ಬೆಳಗ್ಗೆ 11:00 ಗಂಟೆಗೆ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ (ಪಿಎಂಒ) ತಿಳಿಸಿದೆ.
ಪಿಎಂಒ ಪ್ರಕಾರ, ವೀಡಿಯೊ ಕಾನ್ಫರೆನ್ಸಿಂಗ್ ಸಂವಹನವು ಕಾರ್ಯ ಕ್ಷಮತೆ ಪರಿಶೀಲಿಸಲು ಮತ್ತು ಎದುರಿಸುತ್ತಿರುವ ಸವಾಲುಗಳನ್ನು ಕಂಡು ಹಿಡಿಯಲು ಸಹಾಯ ಮಾಡುತ್ತದೆ. ಜಿಲ್ಲೆಗಳಲ್ಲಿ ವಿವಿಧ ಇಲಾಖೆಗಳು ಎಲ್ಲ ಪಾಲುದಾರರೊಂದಿಗೆ ಮಿಷನ್ ಮೋಡ್‌ನಲ್ಲಿ ವಿವಿಧ ಯೋಜನೆಗಳ ಅನುಷ್ಠಾನ ಇದರ ಉದ್ದೇಶವಾಗಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ