ನವದೆಹಲಿ: ಅನೇಕ ಕಾರ್ಯಕ್ರಮಗಳಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಪಿಎಂ ಮೋದಿ ಭಾಗಿಯಾದ ಕಾರ್ಯಕ್ರಮಗಳಲ್ಲಿ ಸಿಎಂ ಕೆಸಿಆರ್ ಹಾಜರಾಗುವುದಿಲ್ಲ. ಹಾಗಿದ್ದರೂ ಇಂದು ಕೆಸಿಆರ್ ಜನ್ಮದಿನದ ನಿಮಿತ್ತ ಪಿಎಂ ಮೋದಿ ಶುಭಕೋರಿದ್ದಾರೆ.
"ತೆಲಂಗಾಣ ಸಿಎಂ ಶ್ರೀ ಕೆಸಿಆರ್ ಗಾರರು ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ" ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಪ್ರಧಾನಿ ಮೋದಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೂ ಅವರ ಹುಟ್ಟುಹಬ್ಬದಂದು ಶುಭಾಶಯ ತಿಳಿಸುತ್ತಾರೆ.
ಇದನ್ನೂ ಓದಿ: ಮೋದಿಯನ್ನ ಅಧಿಕಾರದಿಂದ ಕೆಳಗಿಳಿಸಿ, ಓಡಿಸಲಾಗುವುದು: ಪ್ರಧಾನಿ ವಿರುದ್ಧ ಕೆಸಿಆರ್ ವಾಗ್ದಾಳಿ
ಇನ್ನು ಸಿಎಂ ಕೆಸಿಆರ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ, ರಾಜ್ಯಪಾಲ ತಮಿಳಿಸಾಯಿ ಸೌಂದರರಾಜನ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ, ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡು, ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್, ಅಸ್ಸೋಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ಮೆಗಾಸ್ಟಾರ್ ಚಿರಂಜೀವಿ, ನಟ ಮಹೇಶ್ ಬಾಬು ಕೂಡ ವಿಶ್ ಮಾಡಿದ್ದು, ಹುಟ್ಟುಹಬ್ಬದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.