ಗುಜರಾತ್: ತಾಯಿ ಹೀರಾಬೆನ್ ಮೋದಿ ಅವರು ಗುಜರಾತ್ನಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ನನ್ನ ಅಮ್ಮ ಕೋವಿಡ್-19 ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆಂಬ ವಿಷಯ ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗುತ್ತಿದೆ. ಲಸಿಕೆ ತೆಗೆದುಕೊಳ್ಳಲು ಅರ್ಹರಾಗಿರುವ ನಿಮ್ಮ ಸುತ್ತಮುತ್ತಲಿನ ಜನರಿಗೆ ಸಹಾಯ ಮಾಡುವಂತೆ ಹಾಗೂ ಪ್ರೇರೇಪಿಸುವಂತೆ ನಾನು ಮನವಿ ಮಾಡಿಕೊಳ್ಳುತ್ತೇನೆ ಎಂದು ಪಿಎಂ ಮೋದಿ ಟ್ವೀಟ್ ಮಾಡಿದ್ದಾರೆ.