ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಇಂದು ’ವಿಶ್ವದ ಸ್ಥಿತಿಗತಿ‘ಗಳ ಕುರಿತು ವರ್ಲ್ಡ್ ಎಕಾನಮಿಕ್ ಫೋರಂ ದಾವೋಸ್ ಉದ್ದೇಶಿಸಿ ವಿಶೇಷ ಭಾಷಣ ಮಾಡಲಿದ್ದಾರೆ. ವಿಶ್ವ ಆರ್ಥಿಕ ವೇದಿಕೆ ದಾವೋಸ್ ಜನವರಿ 17 ರಿಂದ 21 ರವರಗೂ ವರ್ಚುಯಲ್ ಮೂಲಕ ವಿಶೇಷ ಕಾರ್ಯಕ್ರಮ ಆಯೋಜಿಸಿದೆ.
ಈ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಶೇಷ ಭಾಷಣ ಮಾಡಲಿದ್ದಾರೆ ಎಂದು ಪ್ರಧಾನಿ ಸಚಿವಾಲಯ ಮಾಹಿತಿ ನೀಡಿದೆ. ಈ ಕಾರ್ಯಕ್ರಮದಲ್ಲಿ ಚೀನಾ ಸೇರಿದಂತೆ ಹಲವಾರು ರಾಷ್ಟ್ರಗಳ ಮುಖ್ಯಸ್ಥರು ಹಲವು ರಾಷ್ಟ್ರಗಳ ಪ್ರಮುಖರು ಭಾಗವಹಿಸಲಿದ್ದಾರೆ.
ಜಪಾನ್‌ನ ಪ್ರಧಾನಿ ಕಿಶಿಡಾ ಫ್ಯೂಮಿಯೊ, ಯುರೋಪಿಯನ್ ಕಮಿಷನ್ ಅಧ್ಯಕ್ಷ ಉರ್ಸುವಾ ವಾನ್ ಡೆರ್ ಲೇಯೆನ್, ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್, ಇಂಡೋನೇಷ್ಯಾದ ಅಧ್ಯಕ್ಷ ಜೋಕೊ ವಿಡೋಡೋ, ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ವರ್ಚುಯಲ್ ಮೂಲಕ ಭಾಗವಹಿಸಿ ಭಾಷಣ ಮಾಡಲಿದ್ದಾರೆ.
ಈ ಕಾರ್ಯಕ್ರಮ ವಿಶ್ವದ ಪ್ರಮುಖ ಉದ್ಯಮಿಗಳು, ಅಂತಾರಾಷ್ಟ್ರೀಯ ಸಂಸ್ಥೆಗಳು ಮತ್ತು ನಾಗರಿಕ ಸಮಾಜದ ಪ್ರಮುಖರ ಭಾಗವಹಿಸುವಿಕೆಗೆ ಸಾಕ್ಷಿಯಾಗಲಿದೆ. ಇಂದು ಜಗತ್ತು ಎದುರಿಸುತ್ತಿರುವ ಸವಾಲುಗಳೂ ಮತ್ತು ಪರಿಹಾರದ ಬಗ್ಗೆ ಈ ಎಲ್ಲ ನಾಯಕರು ಚರ್ಚಿಸಲಿದ್ದಾರೆ.
ಇದನ್ನು ಓದಿ:ಸಚಿವ ಹಾರಕ್ ಸಿಂಗ್ ರಾವತ್ ಉಚ್ಛಾಟಿಸಿದ ಬಿಜೆಪಿ: ಇಂದು ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ