ನವದೆಹಲಿ :ಕೂನೂರು ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಚಿಕಿತ್ಸೆ ಫಲಕಾರಿಯಾಗದೇ ಹುತಾತ್ಮರಾಗಿದ್ದು, ಪ್ರಧಾನಿ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ರಾಷ್ಟ್ರಕ್ಕೆ ಹೆಮ್ಮೆ. ಅವರು ಶೌರ್ಯ ಮತ್ತು ಅತ್ಯಂತ ವೃತ್ತಿಪರತೆಯೊಂದಿಗೆ ಸೇವೆ ಸಲ್ಲಿಸಿದ್ದಾರೆ. ಅವರ ನಿಧನದಿಂದ ನನಗೆ ಅತೀವ ನೋವಾಗಿದೆ.
ದೇಶಕ್ಕೆ ಅವರ ಉತ್ಕೃಷ್ಟ ಸೇವೆ ಎಂದಿಗೂ ಮರೆಯಲಾಗದು. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.