ಟೋಕಿಯೋ: ಜಪಾನ್ನ ಟೋಕಿಯೋದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತದ ಹೈ ಜಂಪರ್ ನಿಷಾದ್ ಕುಮಾರ್ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಕ್ರೀಡಾಕೂಟದಲ್ಲಿ 2ನೇ ಪದಕ ತಂದುಕೊಟ್ಟಿದ್ದಾರೆ. ನಿಷಾದ್ ಸಾಧನೆಗೆ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನ ಮಂತ್ರಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ದೇಶದ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ಟೋಕಿಯೊದಿಂದ ಹೆಚ್ಚು ಸಂತೋಷದಾಯಕ ಸುದ್ದಿ ಬಂದಿದೆ. ಪುರುಷರ ಹೈ ಜಂಪ್ ಟಿ 47 ನಲ್ಲಿ ನಿಶಾದ್ ಕುಮಾರ್ ಬೆಳ್ಳಿ ಪದಕ ಗೆದ್ದಿರುವುದು ತುಂಬಾ ಸಂತೋಷವಾಗಿದೆ. ಅವರೊಬ್ಬ ಅತ್ಯುತ್ತಮ ಕ್ರೀಡಾಪಟು ಮತ್ತು ಅತ್ಯುತ್ತಮ ಕೌಶಲ್ಯ ಮತ್ತು ಸ್ಥಿರತೆ ಹೊಂದಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ರಾಷ್ಟ್ರಪತಿ ಅಭಿನಂದನೆ:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಅಭಿನಂದನೆ ಸಲ್ಲಿಸಿದ್ದಾರೆ. ರಾಷ್ಟ್ರೀಯ ಕ್ರೀಡಾದಿನದಂದು ಭಾರತಕ್ಕೆ ಪ್ಯಾರಾಲಿಂಪಿಕ್ಸ್ನಲ್ಲಿ ಮತ್ತೊಂದು ಬೆಳ್ಳಿ ಪದಕ ಬಂದಿದೆ. ನಿಮ್ಮ ಅದ್ಭುತ ಪ್ರದರ್ಶನಕ್ಕೆ ಅಭಿನಂದನೆಗಳು ನಿಷಾದ್ ಕುಮಾರ್, ಇಡೀ ದೇಶ ಹೆಮ್ಮೆ ಪಡುವಂತೆ ಸಾಧಿಸಿದ್ದೀರಾ ಎಂದು ಟ್ವೀಟ್ ಮಾಡಿದ್ದಾರೆ.
ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಟೋಕಿಯೋ ಪ್ಯಾರಾಲಿಂಪಿಕ್ಸ್ 2020 ಕ್ರೀಡಾಕೂಟದಲ್ಲಿ ಹೈಜಂಪ್ನಲ್ಲಿ ಬೆಳ್ಳಿ ಗೆದ್ದ ಹೈ ಜಂಪರ್ ನಿಷಾದ್ ಕುಮಾರ್ ಅವರಿಗೆ ಅಭಿನಂದನೆಗಳು. ಅವರ ಅದ್ಭುತ ಸಾಧನೆ ಭಾರತಕ್ಕೆ ಹೆಮ್ಮೆ ತಂದಿದೆ. ಅವರು ಮುಂದಿನ ಭವಿಷ್ಯಕ್ಕೆ ಶುಭಾಶಯ ಕೋರುತ್ತೇನೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ರಾಹುಲ್ ಗಾಂಧಿ ಅಭಿನಂದನೆ
ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಪಿಯೂಷ್ ಗೋಯಲ್ ಸೇರಿದಂತೆ ಹಲವಾರು ರಾಜಕೀಯ ನಾಯಕರು ಬೆಳ್ಳಿ ಹುಡುಗನಿಗೆ ಅಭಿನಂದನೆ ಸಲ್ಲಿಸಿದ್ದಾರೆ.