ನವದೆಹಲಿ:ಇಂದು ಮಹಾತ್ಮ ಗಾಂಧೀಜಿಯ 152ನೇ ಜನ್ಮದಿನ ಹಿನ್ನೆಲೆ ರಾಜ್ಘಾಟ್ನಲ್ಲಿರುವ ಗಾಂಧೀಜಿ ಸಮಾಧಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಪುಷ್ಪಾರ್ಚನೆ ಸಲ್ಲಿಸಿ ನಮಿಸಿದರು.
ರಾಜ್ಘಾಟ್ಗೆ ಆಗಮಿಸಿದ ಅವರು, ಭಾರತಕ್ಕೆ ಶಾಂತಿ ಮತ್ತು ಅಹಿಂಸೆಯ ಮೂಲಕ ಸ್ವಾತಂತ್ರ್ಯ ಕೊಡಿಸಿದ ಧೀಮಂತ ನಾಯಕನ ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.
ಇದಕ್ಕೂ ಮೊದಲು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಜನ್ಮದಿನದಂದು ಅವರಿಗೆ ವಿನಮ್ರ ನಮನಗಳು. ಪೂಜ್ಯ ಬಾಪು ಅವರ ಜೀವನ ಮತ್ತು ಆದರ್ಶಗಳು ದೇಶದ ಪ್ರತಿಯೊಂದು ಪೀಳಿಗೆಯನ್ನು ಕರ್ತವ್ಯದ ಹಾದಿಯಲ್ಲಿ ನಡೆಯುವಂತೆ ಪ್ರೇರೇಪಿಸುತ್ತದೆ ಎಂದಿದ್ದಾರೆ.
ಜೊತೆಗೆ ಅವರ ಜನ್ಮ ದಿನ ಹಿನ್ನೆಲೆ ಜಲ ಶಕ್ತಿ ಮತ್ತು ಗ್ರಾಮೀಣ ಸಬಲೀಕರಣಕ್ಕೆ ಸಂಬಂಧಿಸಿದ ಆಸಕ್ತಿದಾಯಕ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ. ಗ್ರಾಮ ಪಂಚಾಯಿತಿ ಸದಸ್ಯರೊಂದಿಗೆ ಸಂವಹನ ನಡೆಸುತ್ತೇನೆ. ಜಲ ಜೀವನ ಮಿಷನ್ ಆಪ್ ಮತ್ತು ರಾಷ್ಟ್ರೀಯ ಜಲ ಜೀವನ್ ಕೋಶ್ ಅನ್ನು ಬಿಡುಗಡೆ ಮಾಡಲಾಗುತ್ತದೆ ಎಂದಿದ್ದಾರೆ.