ನವದೆಹಲಿ: ಬರೋಬ್ಬರಿ ₹3,800 ಕೋಟಿ ಮೊತ್ತದ 8 ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸಗೋಸ್ಕರ ನಿನ್ನೆ ಮಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಕನ್ನಡಿಗರ ಮನ ಗೆದ್ದಿದ್ದಾರೆ. 'ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ. ಪ್ರಮುಖ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದುದು ಸಂತಸ ತಂದಿದೆ' ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ನಿನ್ನೆ ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಆಯೋಜನೆ ಮಾಡಲಾಗಿದ್ದ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿ ನಮೋ ವಿವಿಧ ಅಭಿವೃದ್ಧಿ ಪರ ಯೋಜನೆಗಳಿಗೆ ಚಾಲನೆ ನೀಡಿದ್ದರು. ಈ ವೇಳೆ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಜನರು ನಮೋ ಪರ ಜಯಘೋಷ ಹಾಕಿದ್ದು, ಮೋದಿ.. ಮೋದಿ ಎಂಬ ಘೋಷಣೆ ಕೂಗಿದ್ದರು.