ನವದೆಹಲಿ: ಇಂದು ಭಾರತದ ಮಾಜಿ ಉಪ ಪ್ರಧಾನಿ ಹಾಗೂ ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಅವರ 95ನೇ ಜನ್ಮದಿನದ ನಿಮಿತ್ತ ಅವರ ನಿವಾಸಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಡ್ವಾಣಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
ಪ್ರಸ್ತುತ ಮಾಸ್ಕೋದಲ್ಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್ ಎಲ್‌ಕೆ ಅಡ್ವಾಣಿ ಅವರಿಗೆ “ಪೂಜ್ಯ ಎಲ್‌ಕೆ ಅಡ್ವಾಣಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರು ದೇಶಕ್ಕೆ ನೀಡಿದ ಹಲವಾರು ಕೊಡುಗೆಗಳು ಮತ್ತು ಸೇವೆಗಳು ನಮಗೆ ಯಾವಾಗಲೂ ಸ್ಫೂರ್ತಿ ನೀಡುತ್ತವೆ” ಎಂದು ಟ್ವಿಟರ್ ಮೂಲಕ ಶುಭ ಹಾರೈಸಿದ್ದಾರೆ.
ಗೃಹ ಸಚಿವ ಅಮಿತ್ ಶಾ ಕೂಡ ಅಡ್ವಾಣಿ ಅವರಿಗೆ ಹೃತ್ಪೂರ್ವಕವಾಗಿ ಶುಭಾಶಯ ಕೋರಿದ್ದಾರೆ. ಗೌರವಾನ್ವಿತ ಎಲ್.ಕೆ. ಅಡ್ವಾಣಿ ಅವರಿಗೆ ಜನ್ಮದಿನದ ಶುಭಾಶಯಗಳು. ತಮ್ಮ ನಿರಂತರ ಪರಿಶ್ರಮದಿಂದ ದೇಶಾದ್ಯಂತ ಸಂಘಟನೆಯನ್ನು ಬಲಪಡಿಸಿದರೆ ಮತ್ತೊಂದೆಡೆ ತಮ್ಮ ಅಧಿಕಾರವಧಿಯಲ್ಲಿ ದೇಶದ ಅಭಿವೃದ್ಧಿಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ಅವರಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ದೇವರು ಕೊಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಟ್ವೀಟ್ ಮಾಡಿದ್ದಾರೆ.