ನವದೆಹಲಿ: ಪ್ರಧಾನಿ ನರೇಂದ್ರ ನರೇಂದ್ರ ಮೋದಿ ಇಂದು ಬೆಳಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಇಂದು ಬೆಳಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು - ಪ್ರಧಾನ ಮಂತ್ರಿ ಕಾರ್ಯಾಲಯ
ಇಂದು ಬೆಳಗ್ಗೆ 10 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ.
PM Narendra Modi
ನಿನ್ನೆಯಷ್ಟೇ ಭಾರತದಲ್ಲಿ 100 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿಕೆ ಪೂರ್ಣಗೊಂಡಿದ್ದು, ಕೊರೊನಾ ವಿರುದ್ಧದ ಹೋರಾಟದಲ್ಲಿ ಮಹತ್ವದ ಮೈಲಿಗಲ್ಲೆಂದು ಪರಿಗಣಿಸಲಾಗಿದೆ. ಹೀಗಾಗಿ ಇದರ ಮುಂದುವರೆದ ಭಾಗವಾಗಿ ಪ್ರಧಾನಿ ಇಂದು ಮಾತನಾಡಬಹುದು. ಜೊತೆಗೆ ದೇಶದಲ್ಲಿ ತೈಲ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ಕುರಿತು ಸಹ ಅಭಿಪ್ರಾಯ ವ್ಯಕ್ತಪಡಿಸಬಹುದು ಎಂದು ಹೇಳಲಾಗುತ್ತಿದೆ.