ನವದೆಹಲಿ: ದೇಶಾದ್ಯಂತ ಸಡಗರ ಸಂಭ್ರಮದಿಂದ ಗಣೇಶ ಚತುರ್ಥಿ ಆಚರಣೆ ಮಾಡಲಾಗ್ತಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಅಲ್ಲಿ ಗಣೇಶ ಚತುರ್ಥಿ ಆಚರಣೆಯಲ್ಲಿ ಭಾಗಿಯಾಗಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ತಮ್ಮ ಟ್ವೀಟರ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ದೇಶದ ಜನರಿಗೆ ಗಣೇಶ ಚತುರ್ಥಿಯ ಶುಭ ಕೋರಿರುವ ಪ್ರಧಾನಿ ನರೇಂದ್ರ ಮೋದಿ, ಸಂಸ್ಕೃತದಲ್ಲಿನ ಶ್ಲೋಕ ಹಂಚಿಕೊಂಡಿದ್ದಾರೆ.'ಗಣೇಶ ಚತುರ್ಥಿಯ ಶುಭಾಶಯಗಳು. ಶ್ರೀ ಗಣೇಶನ ಆಶೀರ್ವಾದ ಯಾವಾಗಲೂ ನಮ್ಮ ಮೇಲೆ ಇರಲಿ' ಎಂದು ಟ್ವೀಟ್ ಮಾಡಿದ್ದಾರೆ.
ಗಣೇಶ ಚತುರ್ಥಿಯಂದು ಸಮಸ್ತ ನಾಡಿನ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಮಂಗಳಮೂರ್ತಿ ಗಣಪತಿಯು ಜ್ಞಾನ, ಸಾಧನೆ ಮತ್ತು ಅದೃಷ್ಟದ ಸಂಕೇತವಾಗಿದೆ. ಶ್ರೀ ಗಣೇಶನ ಆಶೀರ್ವಾದದಿಂದ ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿ ಹರಡಲಿ ಎಂದು ನಾನು ಬಯಸುತ್ತೇನೆಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್ ಮಾಡಿದ್ದಾರೆ.