ನವದೆಹಲಿ:ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ದೇಶದ ಎಲ್ಲ ವೈದ್ಯರಿಗೂ ಶುಭಾಶಯ ಕೋರಿದರು. ಮಹಾಮಾರಿ ಕೊರೊನಾ ವೈರಸ್ ಸಂದರ್ಭದಲ್ಲಿ ದೇಶದ ವೈದ್ಯರ ಸೇವೆ ಅನನ್ಯವಾಗಿದ್ದು, ಅದಕ್ಕೆ ನಾವೆಲ್ಲರೂ ಕೃತಜ್ಞರಾಗಿರುತ್ತೇವೆ ಎಂದು ನಮೋ ತಿಳಿಸಿದ್ದಾರೆ.
ಭಾರತೀಯ ವೈದ್ಯಕೀಯ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಳೆದ ಒಂದೂವರೆ ವರ್ಷದಿಂದ ವೈದ್ಯರ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ನಮ್ಮ ವೈದ್ಯರ ಜ್ಞಾನ ಮತ್ತು ಅನುಭವ ಕೋವಿಡ್ ವಿರುದ್ಧದ ಹೋರಾಟದಲ್ಲಿ ನಮಗೆ ಸಹಾಯವಾಗಿದೆ. ಭಾರತದ 130 ಕೋಟಿ ಭಾರತೀಯರ ಪರವಾಗಿ ನಾನು ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.
ದೇಶದ ವೈದ್ಯಕೀಯ ವಲಯ ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶ ಹೊಂದಲಾಗಿದೆ. ಈ ಹಿಂದಿನ ಬಜೆಟ್ಗಳಿಗಿಂತಲೂ ಈ ಸಲ ವೈದ್ಯಕೀಯ ಕ್ಷೇತ್ರಕ್ಕೆ ಹೆಚ್ಚಿನ ಹಣ ಮೀಸಲಿಡಲಾಗಿದೆ. ಈ ವರ್ಷದ ಶೈಕ್ಷಣಿಕ ಸಾಲಿನ ಬಜೆಟ್ನಲ್ಲಿ 2 ಲಕ್ಷ ಕೋಟಿ ರೂ. ಬಳಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು.