ನವದೆಹಲಿ:ಪ್ರತಿ ತಿಂಗಳಿಗೊಮ್ಮೆ ಚುನಾವಣೆಗಳು ನಡೆಯುತ್ತಿರುವ ಕಾರಣದಿಂದ ದೇಶಕ್ಕೆ 'ಒಂದು ರಾಷ್ಟ್ರ, ಒಂದು ಚುನಾವಣೆ'ಯ ಪರಿಕಲ್ಪನೆ ಅತ್ಯಗತ್ಯವಾಗಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.
80ನೇ ಅಖಿಲ ಭಾರತ ಅಧಿಕಾರಿಗಳ ಸಮ್ಮೇಳನದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತುತ ಭಾರತಕ್ಕೆ ಅವಶ್ಯಕತೆಯಿದೆ. ಕೇವಲ ಚರ್ಚೆಯ ವಿಷಯವಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಮರಡೋನಾ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ
ಪ್ರತಿ ತಿಂಗಳು ಒಂದಲ್ಲಾ ಒಂದು ರೀತಿಯ ಚುನಾವಣೆಗಳು ನಡೆಯುತ್ತಿದ್ದು, ಇದು ಅಭಿವೃದ್ಧಿ ಕಾರ್ಯಗಳ ಮೇಲೆ ಸಾಕಷ್ಟು ಪರಿಣಾಮ ಬೀರುತ್ತದೆ. ಇದೇ ಕಾರಣದಿಂದ 'ಒಂದು ರಾಷ್ಟ್ರ ಒಂದು ಚುನಾವಣೆ' ಪರಿಕಲ್ಪನೆ ಬಗ್ಗೆ ಆಳವಾದ ಅಧ್ಯಯನ ಮತ್ತು ಚರ್ಚೆ ನಡೆಸುವ ಅವಶ್ಯಕತೆಯಿದೆ ಎಂದಿದ್ದಾರೆ.