ನವದೆಹಲಿ: ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಂಜಾಬ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಉಂಟಾದ ಭದ್ರತಾ ಲೋಪದ ಕುರಿತು ಇಂದು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯಿತು. ಈ ವೇಳೆ ತಮ್ಮ ಕರ್ತವ್ಯವನ್ನು ನಿರ್ವಹಿಸುವಲ್ಲಿ ಫಿರೋಜ್‌ಪುರ ಹಿರಿಯ ಪೊಲೀಸ್ ಅಧೀಕ್ಷಕರು ವಿಫಲರಾಗಿದ್ದಾರೆ ಎಂದು ಐವರು ಸದಸ್ಯರ ಸಮಿತಿ ವರದಿ ತಿಳಿಸಿದೆ ಅಂತಾ ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿತು.
ನಿವೃತ್ತ ಸುಪ್ರೀಂಕೋರ್ಟ್ನ ನ್ಯಾಯಮೂರ್ತಿ ಮಲ್ಹೋತ್ರಾ ನೇತೃತ್ವದಲ್ಲಿ ಐವರು ಸದಸ್ಯರ ಸಮಿತಿಯನ್ನು ಜನವರಿ 12 ರಂದು ರಚಿಸಲಾಗಿತ್ತು. ಈ ಸಮಿತಿಯು ಫಿರೋಜ್ಪುರದ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ ಬಳಿಕ ಮಾಹಿತಿ ನೀಡಿದೆ. 'ಫಿರೋಜ್‌ಪುರ ಎಸ್‌ಎಸ್‌ಪಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿದ್ದಾರೆ. ಸಾಕಷ್ಟು ಬಲ ಲಭ್ಯವಿದ್ದರೂ ಹಾಗೂ ಪ್ರಧಾನಿ ಆ ಮಾರ್ಗವನ್ನು ಪ್ರವೇಶಿಸುತ್ತಾರೆ ಎಂದು ಎರಡು ಗಂಟೆಗಳ ಮೊದಲು ಅವರಿಗೆ ತಿಳಿಸಿದ್ದರೂ ಸಹ, ಅವರು ತಮ್ಮ ಕರ್ತವ್ಯ ನಿರ್ವಹಿಸಲು ವಿಫಲರಾಗಿದ್ದಾರೆ. ಮಲ್ಹೋತ್ರಾ ಸಮಿತಿಯ ವರದಿಯನ್ನು ಕೇಂದ್ರಕ್ಕೆ ಕಳುಹಿಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ಹಿಮಾ ಕೊಹ್ಲಿ ಅವರನ್ನು ಒಳಗೊಂಡ ಪೀಠ ಹೇಳಿತು.