ನವದೆಹಲಿ: ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರೊಡನೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ದೂರವಾಣಿ ಕರೆ ಮೂಲಕ ಮಾತುಕತೆ ನಡೆಸಿದ್ದಾರೆ. ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳಿಗೆ ತಮ್ಮ ಮೊದಲ ಹಂತದ 2.5 ಕೋಟಿ ಡೋಸ್ ಕೋವಿಡ್ ವ್ಯಾಕ್ಸಿನ್ ಪೂರೈಸುವ ಕಾರ್ಯವನ್ನು ಮೋದಿ ಪ್ರಶಂಸಿಸಿರುವುದಾಗಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಕಮಲಾ ಹ್ಯಾರಿಸ್ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಜಾಗತಿಕ ಲಸಿಕೆ ಹಂಚಿಕೆಯ ಯುಎಸ್ ಸ್ಟ್ರಾಟಜಿ ಭಾಗವಾಗಿ ಭಾರತಕ್ಕೆ ಲಸಿಕೆ ಸರಬರಾಜು ಮಾಡುವ ಭರವಸೆಯನ್ನು ನಾನು ಶ್ಲಾಘಿಸಿದ್ದೇನೆ ಎಂದು ಪಿಎಂ ಮೋದಿ ಟ್ವಿಟರ್ನಲ್ಲಿ ತಿಳಿಸಿದ್ದಾರೆ.
ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರೊಡನೆ ಮಾತನಾಡಿದ್ದೇನೆ. ಅಮೆರಿಕ ಜಾಗತಿಕ ಲಸಿಕೆ ಹಂಚಿಕೆಯ ಭಾಗವಾಗಿ ಭಾರತಕ್ಕೆ ಕೋವಿಡ್ ಲಸಿಕೆ ಸರಬರಾಜು ಮಾಡುವ ಭರವಸೆಯನ್ನು ನಾನು ಶ್ಲಾಘಿಸುತ್ತೇನೆ. ಜೊತೆ ಯುಎಸ್ ಸರ್ಕಾರ ಮತ್ತು ಭಾರತೀಯ ವಲಸೆಗಾರರ ಎಲ್ಲಾ ಬೆಂಬಲ ಮತ್ತು ಒಗ್ಗಟ್ಟಿಗೆ ಧನ್ಯವಾದ ಅರ್ಪಿಸಿದ್ದೇನೆ" ಎಂದು ಮೋದಿ ಟ್ವೀಟ್ ಮಾಡಿದ್ದಾರೆ.