ನವದೆಹಲಿ:ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಸಣ್ಣ ಮತ್ತು ಮಧ್ಯಮ ವರ್ಗದ ರೈತರಿಗೆ ಕೇಂದ್ರ ಸರ್ಕಾರ ಪ್ರತಿ ವರ್ಷ 6 ಸಾವಿರ ರೂ. ನಗದು ನೀಡುತ್ತಿದೆ. ಇದೀಗ 10ನೇ ಕಂತು ಜನವರಿ 1ರಂದು ರೈತರ ಖಾತೆಗೆ ಜಮಾ ಆಗಲಿದೆ.
ಇದಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ಕಚೇರಿ ಮಾಹಿತಿ ನೀಡಿದ್ದು, ಜನವರಿ 1ರಂದು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ 10ನೇ ಕಂತಿನ ಹಣ ವರ್ಗಾವಣೆ ಮಾಡಲಿದ್ದಾರೆ ಎಂದು ತಿಳಿಸಿದೆ. ಪ್ರಧಾನ ಮಂತ್ರಿ ಕಚೇರಿ ನೀಡಿರುವ ಮಾಹಿತಿ ಪ್ರಕಾರ 10 ಕೋಟಿ ಫಲಾನುಭವಿಗಳಿಗೆ 20,000 ಕೋಟಿ ರೂ. ವರ್ಗಾವಣೆಗೊಳ್ಳಲಿದೆ.