ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಕ್ಯಾಬಿನೆಟ್ಗೆ ಮೀನಾಕ್ಷಿ ಲೇಖಿ, ಶೋಭಾ ಕರಂದ್ಲಾಜೆ ಮತ್ತು ಅನುಪ್ರಿಯಾ ಸಿಂಗ್ ಪಟೇಲ್ ಸೇರಿದಂತೆ 11 ಮಹಿಳೆಯರು ಸೇರಿದ್ದಾರೆ. ಕರ್ನಾಟಕದಿಂದ ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ನಾರಿಶಕ್ತಿ ಸೇರಿದ್ದು, ಇದೀಗ ಈಟಿವಿ ಭಾರತ ನಡೆಸಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ್ದಾರೆ.
"ಪ್ರಧಾನಿ ನರೇಂದ್ರ ಮೋದಿ ಮಹಿಳಾ ಸಬಲೀಕರಣದತ್ತ ಗಮನಹರಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಮಹಿಳೆಯರಿಗೆ ಸ್ಥಾನಗಳನ್ನು ಕಾಯ್ದಿರಿಸುವ ಮೂಲಕ ರಾಜಕೀಯದಲ್ಲಿನ ಲಿಂಗ ಅಸಮಾನತೆಯನ್ನು ಹೋಗಲಾಡಿಸಲು ಶ್ರಮಿಸುತ್ತಿದ್ದಾರೆ. ರಾಜಕೀಯದಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚುತ್ತಿದೆ. ಇದು ಮಹಿಳೆಯರ ಸಮಸ್ಯೆಗಳನ್ನು ಸಮರ್ಥವಾಗಿ ಪರಿಹರಿಸಲು ಸರ್ಕಾರಕ್ಕೆ ಸಹಾಯ ಮಾಡುತ್ತದೆ" ಎಂದು ಹೇಳಿದರು.