ಭಾರತೀಯ ಸ್ಟೇಟ್ ಬ್ಯಾಂಕ್ನಿಂದ ಪ್ರೊಬೇಷನರಿ ಆಫೀಸರ್ (ಪಿಒ) ಹುದ್ದೆ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ದೇಶಾದ್ಯಂತ ಒಟ್ಟು 2,000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ದೇಶಾದ್ಯಂತ ನೇಮಕಾತಿ ನಡೆಯಲಿದೆ. ಪದವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ: ಅಧಿಕೃತ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಮತ್ತು ಅಂತಿಮ ವರ್ಷದಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದು, ಫಲಿತಾಂಶದ ವೇಳೆ ಪದವಿ ಪ್ರಮಾಣ ಪತ್ರ ಹೊಂದುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 21 ಮತ್ತು ಗರಿಷ್ಠ 30 ವರ್ಷದ ವಯೋಮಿತಿ ಹೊಂದಿರಬೇಕು. ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ 3 ವರ್ಷ ವಿನಾಯಿತಿ ಇದೆ.
ವೇತನ: ಮಾಸಿಕ 36,000 -63,840 ರೂವರೆಗೆ ವೇತನ. ಆಯ್ಕೆಯಾದ ಅಭ್ಯರ್ಥಿಗಳು ಪಿಎಫ್, ಎಚ್ಆರ್ಎ, ಡಿಎ, ಪಿಂಚಣಿ ಸೌಲಭ್ಯ ಹೊಂದಿರುತ್ತಾರೆ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ, ಇಡಬ್ಲ್ಯೂಸಿ ಮತ್ತು ಒಬಿಸಿ ಅಭ್ಯರ್ಥಿಗಳು 750 ರೂ ಅರ್ಜಿ ಶುಲ್ಕ ಭರಿಸಬೇಕಿದ್ದು, ಇತರೆ ಮೀಸಲಾತಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ: ಪ್ರೈಮರಿ ಪರೀಕ್ಷೆ, ಮೇನ್ಸ್, ಸೈಕೋಮೆಟ್ರಿಕ್ ಪರೀಕ್ಷೆ, ಗ್ರೂಪ್ ಎಕ್ಸ್ಸೈಸ್, ಸಂದರ್ಶನ ಅಥವಾ ಗ್ರೂಪ್ ಡಿಸ್ಕಶನ್, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ನಡೆಸಲಾಗುವುದು.
ಅಭ್ಯರ್ಥಿಗಳು ಸೆಪ್ಟೆಂಬರ್ 7ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್ 27. ನೇಮಕಾತಿ ಪ್ರೈಮರಿ ಪರೀಕ್ಷೆ ಅಕ್ಟೋಬರ್ ಎರಡನೇ ವಾರದಲ್ಲಿ ನಡೆಸುವ ಸಾಧ್ಯತೆ ಇದೆ.
ಅಭ್ಯರ್ಥಿಗಳುbank.sbi/careers/current-opening ಜಾಲತಾಣದ ಮೂಲಕವೇ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಶುಲ್ಕವನ್ನು ಇದೇ ಲಿಂಕ್ ಮೂಲಕ ಭರಿಸಬೇಕು. ಈ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಅಭ್ಯರ್ಥಿಗಳು sbi.co.inಈ ಜಾಲತಾಣಕ್ಕೆ ಭೇಟಿ ನೀಡಬಹುದು.
ಇದನ್ನೂ ಓದಿ: KMF Recruitment: ಕೊಮುಲ್ನಲ್ಲಿ 179 ಹುದ್ದೆಗಳಿಗೆ ನೇಮಕಾತಿ.. ಇಲ್ಲಿದೆ ಸಂಪೂರ್ಣ ಮಾಹಿತಿ