ಮುಜಫರಾಬಾದ್:ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಬದುಕುಳಿದಿರುವ ಯುವತಿಯೋರ್ವಳು ಭಾರತದ ಪ್ರಧಾನಿ ನರೇಂದ್ರ ಮೋದಿ ಬಳಿ ಮನವಿ ಮಾಡಿಕೊಂಡಿದ್ದಾರೆ. 'ನಾನು ಮತ್ತು ನನ್ನ ಮಕ್ಕಳು ಪ್ರತಿ ದಿನ ಜೀವ ಬೆದರಿಕೆ ಎದುರಿಸುತ್ತಿದ್ದು, ಭಾರತಕ್ಕೆ ಬರಲು ಅವಕಾಶ ನೀಡಿ' ಎಂದು ಸಹಾಯ ಕೋರಿದ್ದಾರೆ.
2015ರಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿರುವ ಸಂತ್ರಸ್ತೆ ಮರಿಯಾ ತಾಹಿರ್, ತನಗೆ ಮತ್ತು ತನ್ನ ಮಕ್ಕಳಿಗೆ ಆಶ್ರಯ ನೀಡುವಂತೆ ಮೋದಿ ಬಳಿ ಮನವಿ ಮಾಡಿಕೊಂಡಿದ್ದಾರೆ. ಕಳೆದ ಏಳು ವರ್ಷಗಳ ಹಿಂದೆ ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ನ್ಯಾಯ ಒದಗಿಸುವಲ್ಲಿ ನ್ಯಾಯಾಲಯ, ಪೊಲೀಸರು ಮತ್ತು ಸರ್ಕಾರ ವಿಫಲವಾಗಿದೆ ಎಂದು ವಿಡಿಯೋ ಸಂದೇಶ ರವಾನೆ ಮಾಡಿದ್ದಾರೆ. ರಾಜಕಾರಣಿ ಚೌಧರಿ ತಾರಿಕ್ ಫಾರೂಕ್ ಮತ್ತು ಪೊಲೀಸರು ನನ್ನನ್ನು ಕೊಲ್ಲಬಹುದು ಎಂದು ಮಾರಿಯಾ ಹೇಳಿಕೊಂಡಿದ್ದಾರೆ. ಕಳೆದ ಏಳು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದೇನೆ. ಆದರೆ, ನನಗೆ ನ್ಯಾಯ ಕೊಡಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದಿದ್ದಾರೆ.