ನೋಯ್ಡಾ:ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಸ್ಪಾ ಮೇಲೆ ದಾಳಿ ನಡೆಸಿದ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ.
ಇಲ್ಲಿನ ಸೆಕ್ಟರ್ 61ರ ಮಾಲ್ವೊಂದರಲ್ಲಿದ್ದ ಸ್ಪಾದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿತ್ತು. ಈ ಹಿನ್ನೆಲೆ ದಾಳಿ ನಡೆಸಿದ ಪೊಲೀಸರು ಸ್ಪಾ ಮಾಲೀಕ ಸೇರಿ 7 ಮಂದಿಯನ್ನು ಬಂಧಿಸಿದ್ದಾರೆ. ಅಲ್ಲದೆ ದಂಧೆಗೆ ಬಳಸುತ್ತಿದ್ದ 14 ಮಹಿಳೆಯರನ್ನು ರಕ್ಷಿಸಲಾಗಿದೆ.