ಹೈದರಾಬಾದ್ : ಜುಬಿಲಿಹಿಲ್ಸ್ ಅಪ್ರಾಪ್ತ ಬಾಲಕಿಯ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಆರೋಪಿಗಳಲ್ಲಿ ಮೂವರು ಅಪ್ರಾಪ್ತ ವಯಸ್ಕರರು ಮತ್ತು ಒಬ್ಬ ಮೇಜರ್ ಎಂದು ಪೊಲೀಸರು ಖಚಿತಪಡಿಸಿದ್ದಾರೆ.
ಮೂವರು ಅಪ್ರಾಪ್ತರನ್ನು ಬಾಲಾಪರಾಧಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಾಲಾಪರಾಧಿ ಗೃಹಕ್ಕೆ ಸ್ಥಳಾಂತರಿಸಲಾಗಿದೆ. ಮತ್ತೋರ್ವ ಆರೋಪಿ ಉಮರ್ ಖಾನ್ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದು ಡಿಸಿಪಿ ಜೋಯಲ್ ಡೇವಿಸ್ ಮಾಹಿತಿ ನೀಡಿದ್ದಾರೆ.
ಕಾರಿನ ಬಗ್ಗೆ ತನಿಖೆ :ಜುಬಿಲಿ ಹಿಲ್ಸ್‌ನಲ್ಲಿ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಪತ್ತೆಯಾಗಿವೆ. ಅತ್ಯಾಚಾರದ ನಂತರ ಆರೋಪಿಗಳು ಕಾರಿನಲ್ಲಿ ಮೊಯಿನಾಬಾದ್‌ಗೆ ಹೋಗಿರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅವರು ರಾಜಕೀಯ ನಾಯಕರೊಬ್ಬರ ತೋಟದ ಮನೆಗೆ ಹೋಗಿದ್ದರು ಎಂದೂ ಸಹ ತಿಳಿದು ಬಂದಿದೆ. ಅಲ್ಲಿಂದ ಅವರು ಬೇರೆ ಬೇರೆ ಸ್ಥಳಗಳಿಗೆ ಸಂಚರಿಸಿದ್ದಾರೆ. ಕಾರ್ ವಶಕ್ಕೆ ಪಡೆದಿರುವ ಪೊಲೀಸರು ಅದರ ಬಗ್ಗೆ ತನಿಖೆ ತೀವ್ರಗೊಳಿಸಿದ್ದಾರೆ.