ದುಸಾ(ರಾಜಸ್ಥಾನ):ಕಳ್ಳತನಕ್ಕೆ ಯತ್ನಿಸುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ದುಸಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ 15 ದಿನಗಳಿಂದ ನಗರದಲ್ಲಿ ನಿರಂತರ ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು, ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದವು. ಕಳ್ಳತನಕ್ಕೆ ಕಡಿವಾಣ ಹಾಕಲು ಪೊಲೀಸರು ಮುಂದಾಗಿದ್ದು, ಮಾಹಿತಿದಾರರ ಮೂಲಕ ಮಾಹಿತಿ ಪಡೆದರು. ಆದರೆ ಸಿಕ್ಕಿಬಿದ್ದ ವ್ಯಕ್ತಿ ಪೊಲೀಸ್ ಎಂದು ತಿಳಿದು ಬಂದಿದೆ.
ಸೋಮನಾಥ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯೊಂದಕ್ಕೆ ಕಳ್ಳತನ ಮಾಡಲು ಗೋಡೆ ಹತ್ತಿ ವ್ಯಕ್ತಿಯೊಬ್ಬ ಪ್ರವೇಶಿಸಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ನಂತರ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸ್ ತಂಡ ಜಿತೇಂದ್ರ ಸಿಂಗ್ ಎಂಬ ವ್ಯಕ್ತಿಯನ್ನು ಬಂಧಿಸಿದೆ. ಆತನ ವಿಚಾರಣೆ ನಡೆಸಿದಾಗ ದುಸಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾನ್ಸ್ಟೇೆಬಲ್ ಎಂಬ ವಿಚಾರ ಬೆಳಕಿಗೆ ಬಂದಿದೆ.