ಪುಣೆ:ರಾಜ್ಗಢ್ ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ನಿರ್ಧಾರ ಕೈಗೊಳ್ಳುವುದಕ್ಕೂ ಮುಂಚಿತವಾಗಿ ಸೂಸೈಡ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಕ್ಷಮಿಸು ತಾಯಿ ಎಂದು ಕೇಳಿಕೊಂಡಿದ್ದಾನೆ.
ಗ್ರಾಮೀಣ ಪೊಲೀಸ್ ಠಾಣೆ ಕಾನ್ಸ್‌ಟೇಬಲ್ ಆಗಿದ್ದ ಮೊಹಮ್ಮದ್ ಮಾನೇರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇಂದಾಪುರ ತಾಲೂಕಿನವರಾಗಿದ್ದು, ಸದ್ಯ ರಾಜ್ಗಢ್ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ರಕ್ತನಾಳ ಕತ್ತರಿಸಿಕೊಳ್ಳುವ ಮೂಲಕ ಸಾವನ್ನಪ್ಪಿದ್ದಾನೆ.