ಮುಂಬೈ:ಮಹಾರಾಷ್ಟ್ರ ನವ ನಿರ್ಮಾಣ ಸೇನೆಯ (ಎಂಎನ್‌ಎಸ್) ವಕ್ತಾರ ಹಾಗೂ ಪ್ರಧಾನ ಕಾರ್ಯದರ್ಶಿ ಸಂದೀಪ್ ದೇಶಪಾಂಡೆ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ದುಷ್ಕರ್ಮಿಗಳನ್ನು ಶನಿವಾರ ಬಂಧಿಸಿದ್ದು. ಇನ್ನುಳಿದ ಇಬ್ಬರು ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ಮುಂದುವರೆದಿದೆ ಎಂದು ಶಿವಾಜಿ ಪಾರ್ಕ್ ಪೊಲೀಸ್ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆಯ ಹಿನ್ನೆಲೆ: ಶಿವಸೇನೆ ರಾಜ್ ಠಾಕ್ರೆ ಆಪ್ತ ಹಾಗೂ ಎಂಎನ್‌ಎಸ್ ಮುಖಂಡ ಸಂದೀಪ್ ದೇಶಪಾಂಡೆ ಅವರು ಶುಕ್ರವಾರ ದಾದರ್ನ ಶಿವಾಜಿ ಪಾರ್ಕ್ನಲ್ಲಿ ಬೆಳಗ್ಗೆ 7 ಗಂಟೆಗೆ ಸುಮಾರಿಗೆ ವಾಕಿಂಗ್ ಮಾಡುವ ಸಂದರ್ಭದಲ್ಲಿ ಅವರ ಮೇಲೆ ಅಪರಿಚಿತ ಗುಂಪೊಂದು ಕ್ರಿಕೆಟ್ ಸ್ಟಂಪ್ಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಈ ಸಂಬಂಧ ಶಿವಾಜಿ ಪಾರ್ಕ್ ಪೊಲೀಸ್ ಠಾಣೆಯಲ್ಲಿ ನಿನ್ನೆ ಪ್ರಕರಣ ದಾಖಲಾಗಿತ್ತು. ಬಳಿಕ ಶಿವಾಜಿ ಪಾರ್ಕ್ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ಇಬ್ಬರು ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ.
ರಾಜಕೀಯ ವೈಷಮ್ಯ: ಬಂಧಿತರನ್ನು ಆರೋಪಿಗಳು ಪಶ್ಚಿಮ ಭದುಂಪ್ ಪ್ರದೇಶದ ನಿವಾಸಿಗಳಾದ ಅಶೋಕ್ ಮತ್ತು ಸೋಲಂಕಿ ಎಂದು ತಿಳಿದು ಬಂದಿದೆ. ರಾಜಕೀಯ ವೈಷಮ್ಯದಿಂದ ಈ ದಾಳಿ ನಡೆಸಲಾಗಿದ್ದು, ಇನ್ನುಳಿದ ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ಶಿವಾಜಿ ಪಾರ್ಕ್ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಸತೀಶ್ ಕಸ್ಬೆ ಮಾಹಿತಿ ನೀಡಿದರು.ಘಟನೆ ಬಗ್ಗೆ ತಿಳಿದಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸಂದೀಪ್ ದೇಶಪಾಂಡೆ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ತಿಳಿದು ಬಂದಿದೆ.