ನವದೆಹಲಿ:ಯುವ ಕುಸ್ತಿಪಟು ಸಾಗರ್ ಧಂಕರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಹಾಗೂ ಇತರ 19 ಮಂದಿ ವಿರುದ್ಧ ಇದೀಗ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ಆದರೆ, ಈ ಪ್ರಕರಣದಲ್ಲಿ ಭಾಗಿಯಾಗಿರುವ ಐವರು ತಲೆಮರೆಸಿಕೊಂಡಿದ್ದು, ಅವರಿಗೋಸ್ಕರ ಶೋಧಕಾರ್ಯ ಮುಂದುವರೆದಿದೆ.
ಮೇ. 4ರ ಮಧ್ಯರಾತ್ರಿ 23 ವರ್ಷದ ಕುಸ್ತಿಪಟು ಸಾಗರ್ ಧನ್ಕರ್ ಹಾಗೂ ಆತನ ಸ್ನೇಹಿತರಾದ ಸೋನು ಹಾಗೂ ಅಮಿತ್ ಕುಮಾರ್ ಮೇಲೆ ಕುಸ್ತಿಪಟು ಸುಶೀಲ್ ಕುಮಾರ್ ಹಾಗೂ ಸಹಚರರು ಹಲ್ಲೆ ನಡೆಸಿದ್ದರು ತತ್ಪರಿಣಾಮ ಸಾಗರ್ ಧನ್ಕರ್ ಮೃತಪಟ್ಟಿದ್ದಾರೆ. ಎಲೆಕ್ಟ್ರಾನಿಕ್ ಸಾಕ್ಷ್ಯದಲ್ಲಿ ಸುಶೀಲ್ ಕುಮಾರ್ ಹಾಗೂ ಆತನ ಸಹಚರರು ಹಲ್ಲೆ ನಡೆಸಿದ್ದು ಸ್ಪಷ್ಟವಾಗಿತ್ತು.