ಮಥುರಾ (ಉತ್ತರಪ್ರದೇಶ):ಮಥುರಾದಲ್ಲಿರುವ ಶಾಹಿ ಮಸೀದಿ ಈದ್ಗಾದಲ್ಲಿ ಮಂಗಳವಾರ ಹನುಮಾನ್ ಚಾಲೀಸಾ ಪಠಿಸಲು ಅಖಿಲ ಭಾರತ ಹಿಂದೂ ಮಹಾಸಭಾ ಕರೆ ನೀಡಿದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಹಾಕಲಾಗಿದೆ. ಯಾವುದೇ ಹೊಸ ಸಂಪ್ರದಾಯ ಅಥವಾ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಪೊಲೀಸ್ ಇಲಾಖೆ ಹೇಳಿದೆ.
1,500 ಪೊಲೀಸರು, ಸಶಸ್ತ್ರ ಕಾನ್‌ಸ್ಟೇಬಲ್, ಅರೆಸೇನಾ ಪಡೆಯನ್ನು ಮಥುರಾದಲ್ಲಿ ನಿಯೋಜಿಸಲಾಗಿದೆ. ಶ್ರೀಕೃಷ್ಣ ದೇಗುಲ ಮತ್ತು ಶಾಹಿ ಮಸೀದಿ ಈದ್ಗಾ ಸಂಪರ್ಕಿಸುವ ಎಲ್ಲ ರಸ್ತೆಗಳನ್ನು ನಿರ್ಬಂಧಿಸಲಾಗಿದೆ. ಶಾಲಾ ವಾಹನಗಳು ಮತ್ತು ಆಂಬ್ಯುಲೆನ್ಸ್‌ಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ.
ಮಸೀದಿ ಶ್ರೀಕೃಷ್ಣ ದೇವಾಲಯಕ್ಕೆ ಸೇರಿದ್ದಾಗಿದೆ. ಅದನ್ನು ದೇವಾಲಯ ಆಡಳಿತದ ಸುಪರ್ದಿಗೆ ನೀಡಬೇಕು ಎಂದು ಅಖಿಲ ಭಾರತ ಹಿಂದೂ ಮಹಾಸಭಾ ಬಲವಾಗಿ ಆಗ್ರಹಿಸಿದೆ. ಮಸೀದಿಯಲ್ಲಿ ಮಂಗಳವಾರ ಹನುಮಾನ್ ಚಾಲೀಸಾ ಪಠಣ ಮಾಡಲಾಗುವುದು ಎಂದು ಕರೆ ಕೂಡ ನೀಡಲಾಗಿದೆ.