ಲಕ್ನೋ(ಉತ್ತರ ಪ್ರದೇಶ): ಉತ್ತರ ಪ್ರದೇಶ ವಿಧಾನಸಭೆ ಹೊರಗಡೆ ಸಬ್ ಇನ್ಸ್ಪೆಕ್ಟರ್ ಒಬ್ಬರು ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ.
ಉತ್ತರ ಪ್ರದೇಶ ಅಸೆಂಬ್ಲಿ ಗೇಟ್ ನಂಬರ್ 7ರಲ್ಲಿ ಈ ಘಟನೆ ನಡೆದಿದ್ದು, ತನ್ನ ಬಳಿಯಿದ್ದ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡಿದ್ದಾರೆ. ಸ್ಥಳದಲ್ಲಿ ಸೊಸೈಡ್ ನೋಟ್ ಸಿಕ್ಕಿದ್ದು, ಅದರ ಪ್ರಕಾರ ಕೆಲ ಕಾಯಿಲೆಗಳಿಂದ ಅವರು ಬಳಲುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.