ಜಲಂಧರ್(ಪಂಜಾಬ್) : ರಸ್ತೆ ದಾಟಲು ಕಾಯುತ್ತಿದ್ದ ಸಂದರ್ಭದಲ್ಲಿ ಇಬ್ಬರು ಯುವತಿಯರ ಮೇಲೆ ಪೊಲೀಸ್ ಇನ್ಸ್ಪೆಕ್ಟರ್ ಕಾರು ಹರಿಸಿಕೊಂಡು ಹೋಗಿರುವ ಘಟನೆ ನಡೆದಿದ್ದು, ಇದರ ಸಂಪೂರ್ಣ ದೃಶ್ಯಾವಳಿ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಯುವತಿಯರಿಬ್ಬರ ಮೇಲೆ ಕಾರು ಹರಿಸಿದ ಇನ್ಸ್ಪೆಕ್ಟರ್ ಇದನ್ನೂ ಓದಿರಿ:ರಂಜಿತ್ ಸಿಂಗ್ ಕೊಲೆ ಪ್ರಕರಣ : ರಾಮ್ ರಹೀಮ್ ಸೇರಿ ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಪಂಜಾಬ್ನ ಜಲಂಧರ್ನಲ್ಲಿ ಈ ಘಟನೆ ನಡೆದಿದ್ದು, ಘಟನೆಯಿಂದ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಸ್ತೆ ದಾಟಲು ಯುವತಿಯರಿಬ್ಬರು ರಸ್ತೆ ವಿಭಾಜಕದ ಪಕ್ಕದಲ್ಲಿ ನಿಂತುಕೊಂಡಿದ್ದರು.
ಈ ವೇಳೆ, ರಭಸವಾಗಿ ಕಾರು ಚಾಲನೆ ಮಾಡಿಕೊಂಡು ಬಂದಿರುವ ಇನ್ಸ್ಪೆಕ್ಟರ್ ಅಮೃತ್ ಪಾಲ್ ಸಿಂಗ್, ಇಬ್ಬರು ಯುವತಿಯರಿಗೆ ಡಿಕ್ಕಿ ಹೊಡೆಸಿ ಅವರ ಮೇಲೆಯೇ ಚಲಾಯಿಸಿ ಪರಾರಿಯಾಗಿದ್ದಾನೆ. ಇದರ ವಿಡಿಯೋ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಇಂದು ಬೆಳಗ್ಗೆ 8:30ರ ಸುಮಾರಿಗೆ ಈ ಘಟನೆ ನಡೆದಿದೆ. ಯುವತಿಯರಿಗೆ ಕಾರು ಗುದ್ದಿಸಿರುವ ಇನ್ಸ್ಪೆಕ್ಟರ್ ತಂದನಂತರ ಕಾರು ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಎಸಿಪಿ ಬಲವೀಂದರ್ ಸಿಂಗ್, ಈಗಾಗಲೇ ಆರೋಪಿಯ ಬಂಧನ ಮಾಡಲಾಗಿದ್ದು, ಕಾನೂನಿನ ಪ್ರಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.