ಕರ್ನಾಟಕ

karnataka

ETV Bharat / bharat

ಶ್ರೀನಗರದಲ್ಲಿ ಪೊಲೀಸ್ ಅಧಿಕಾರಿ ಮೇಲೆ ಭಯೋತ್ಪಾದಕರಿಂದ ಗುಂಡಿನ ದಾಳಿ - ಪೊಲೀಸ್ ಅಧಿಕಾರಿ ಮೇಲೆ ಭಯೋತ್ಪಾದಕರಿಂದ ಗುಂಡಿನ ದಾಳಿ

ಶ್ರೀನಗರದಲ್ಲಿ ಪೊಲೀಸ್ ಅಧಿಕಾರಿ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

ಪೊಲೀಸ್ ಅಧಿಕಾರಿ ಮೇಲೆ ಭಯೋತ್ಪಾದಕರಿಂದ ಗುಂಡಿನ ದಾಳಿ
ಪೊಲೀಸ್ ಅಧಿಕಾರಿ ಮೇಲೆ ಭಯೋತ್ಪಾದಕರಿಂದ ಗುಂಡಿನ ದಾಳಿ

By ETV Bharat Karnataka Team

Published : Oct 29, 2023, 6:50 PM IST

ಶ್ರೀನಗರ : ಶ್ರೀನಗರದಲ್ಲಿ ಇಂದು ಮಧ್ಯಾಹ್ನ ಉಗ್ರರು ಪೊಲೀಸ್ ಇನ್ಸ್‌ಪೆಕ್ಟರ್ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ಇನ್ಸ್​ಪೆಕ್ಟರ್​ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಶ್ರೀನಗರದ ಈದ್ಗಾ ಬಳಿ ಇನ್ಸ್‌ಪೆಕ್ಟರ್ ಮಸ್ರೂರ್ ಅಹ್ಮದ್ ಮೇಲೆ ಗುಂಡು ಹಾರಿಸಿದ್ದರಿಂದ ಅವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. "ತಕ್ಷಣ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಪ್ರಾಥಮಿಕ ತನಿಖೆಯಲ್ಲಿ ಈ ಭಯೋತ್ಪಾದಕ ಅಪರಾಧದಲ್ಲಿ ಪಿಸ್ತೂಲ್ ಅನ್ನು ಬಳಸಲಾಗಿದೆ ಎಂದು ತಿಳಿದುಬಂದಿದೆ. ಘಟನಾ ಪ್ರದೇಶವನ್ನು ಸುತ್ತುವರಿದಿದ್ದು, ಪ್ರಕರಣವನ್ನು ದಾಖಲಿಸಲಾಗಿದೆ" ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಎಕ್ಸ್‌ ಖಾತೆಯಲ್ಲಿ ತಿಳಿಸಿದ್ದಾರೆ.

ಪೊಲೀಸ್ ಇನ್ಸ್​ಪೆಕ್ಟರ್ ಅವರನ್ನು ಶ್ರೀನಗರದ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ನಕಲಿ ಪಾಸ್‌ಪೋರ್ಟ್‌ ಬಳಸಿ ಭಾರತಕ್ಕೆ ಕಾಲಿಟ್ಟಿರುವ 70 ಶಂಕಿತ ಉಗ್ರರು:ನಕಲಿ ಪಾಸ್‌ಪೋರ್ಟ್‌ನೊಂದಿಗೆ ಉಗ್ರರು ಅಕ್ರಮವಾಗಿ ದೇಶಕ್ಕೆ ಪ್ರವೇಶಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಸಂಸ್ಥೆಗಳು ಶಂಕೆ (ಅಕ್ಟೋಬರ್ 21-2023) ವ್ಯಕ್ತಪಡಿಸಿದ್ದವು. ಸುಮಾರು 70 ಉಗ್ರರು ನೇಪಾಳದ ಗಡಿಯಿಂದ ಭಾರತವನ್ನು ಪ್ರವೇಶಿಸಿದ್ದಾರೆ. ಇವರೆಲ್ಲರೂ ಐಎಸ್‌ಐ (ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್) ಅಥವಾ ಜಮ್ಮತ್-ಉಲ್-ಮುಜಾಹಿದೀನ್ ಬಾಂಗ್ಲಾದೇಶಕ್ಕೆ ಸೇರಿದವರು ಎಂದು ಗುರುತಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಬಾಂಗ್ಲಾದೇಶದ ಗಡಿಯಲ್ಲಿ ಎಚ್ಚರಿಕೆ ನೀಡಲಾಗಿತ್ತು.

ಪ್ರಸ್ತುತ ಎಲ್ಲಾ ಗಡಿಗಳಲ್ಲಿ ಬಿಗಿ ಬಂದೋಬಸ್ತ್​ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಕೆಲವೆಡೆ ಮಾತ್ರ ಅಕ್ರಮವಾಗಿ ಉಗ್ರರು ನುಗ್ಗುತ್ತಿದ್ದರು. ಅದರಲ್ಲೂ ಪಾಕಿಸ್ತಾನದ ಕಡೆಯಿಂದ ಭಾರತದೊಳಗೆ ನುಸುಳುವುದು ಅಸಾಧ್ಯ. ಅದಕ್ಕಾಗಿಯೇ ನೇಪಾಳದ ಗಡಿಯಿಂದ ಭಯೋತ್ಪಾದಕರು ಭಾರತಕ್ಕೆ ಬರುತ್ತಿದ್ದಾರೆ. ಭಯೋತ್ಪಾದಕರ ಹೊರತಾಗಿ ಕೆಲವು ವಿದೇಶಿಯರೂ ದೇಶಕ್ಕೆ ಪ್ರವೇಶಿಸಿದ್ದಾರೆ ಎಂದು ಕೇಂದ್ರ ತನಿಖಾ ಸಂಸ್ಥೆಯ ಮೂಲಗಳು ತಿಳಿಸಿದ್ದವು.

ಅಕ್ರಮವಾಗಿ ಭಾರತ ಪ್ರವೇಶಿಸಿರುವ ಭಯೋತ್ಪಾದಕರ ಶೋಧಕ್ಕೆ ಕ್ರಮ ಕೈಗೊಂಡಿರುವುದಾಗಿ ಕೇಂದ್ರ ಸಂಸ್ಥೆಯ ಮೂಲಗಳು ತಿಳಿಸಿದ್ದವು. ಕೇಂದ್ರ ಸರ್ಕಾರದ ವಿವಿಧ ತನಿಖಾ ಸಂಸ್ಥೆಗಳು ಭಯೋತ್ಪಾದಕರಿಗಾಗಿ ಶೋಧ ಕಾರ್ಯ ಆರಂಭಿಸಿರುವುದಾಗಿ ತಿಳಿಸಿದ್ದವು. ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಕೇಂದ್ರ ಭದ್ರತಾ ಏಜೆನ್ಸಿಗಳೊಂದಿಗೆ ಈಗಾಗಲೇ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಸೇರಿದಂತೆ ಹಲವು ಪ್ರದೇಶಗಳಲ್ಲಿ ಶೋಧ ನಡೆಸಿದ್ದವು. ಕೆಲವರು ನಕಲಿ ಪಾಸ್‌ಪೋರ್ಟ್‌ನೊಂದಿಗೆ ಪ್ರವೇಶಿಸಿರುವುದು ಪತ್ತೆಯಾಗಿತ್ತು. ಸಿಬಿಐ ರಾಷ್ಟ್ರೀಯ ತನಿಖಾ ಸಂಸ್ಥೆ ಜೊತೆ ಬಂಗಾಳ ಪೊಲೀಸರು ಸಭೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿತ್ತು.

ಇತ್ತೀಚಿನ ಘಟನೆ- ಭಯೋತ್ಪಾದನೆ ಮೇಲೆ ಎನ್ಐಎ ದಾಳಿ:ಖಲಿಸ್ತಾನ್ ಮತ್ತು ಇತರ ಭಯೋತ್ಪಾದಕ ಗುಂಪುಗಳು, ದರೋಡೆಕೋರರು ಮತ್ತು ಕಳ್ಳಸಾಗಣೆದಾರರನ್ನು ಹತ್ತಿಕ್ಕುವ ಉದ್ದೇಶದಿಂದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಇತ್ತೀಚೆಗೆ ದೇಶದ ಹಲವು ರಾಜ್ಯಗಳಲ್ಲಿ ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿತ್ತು. ಸ್ಥಳೀಯ ಪೊಲೀಸರ ಜೊತೆಗೆ ಪಂಜಾಬ್, ರಾಜಸ್ಥಾನ, ಹರಿಯಾಣ, ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ದೆಹಲಿ ಮತ್ತು ಚಂಡೀಗಢದ ಕೇಂದ್ರಾಡಳಿತ ಪ್ರದೇಶಗಳ 53 ಪ್ರದೇಶಗಳಲ್ಲಿ ಏಕಕಾಲದಲ್ಲಿ ಎನ್​ಐಎ ದಾಳಿ ನಡೆಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದರು.

ಇದನ್ನೂ ಓದಿ:ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ಹುಟ್ಟಡಗಿಸಲು 100 ಕೋಬ್ರಾ ಕಮಾಂಡೋಗಳ ನಿಯೋಜನೆ

ABOUT THE AUTHOR

...view details