ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರನ್ನು ಅವರ ಮನೆಯೊಳಗೆ ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸಬ್ ಇನ್ಸ್‌ಪೆಕ್ಟರ್ ಫಾರೂಕ್ ಅಹ್ಮದ್ ಮಿರ್ ಮೃತ ಪೊಲೀಸ್ ಅಧಿಕಾರಿಯಾಗಿದ್ದಾರೆ.
ಶುಕ್ರವಾರ ಮತ್ತು ಶನಿವಾರ ಮಧ್ಯರಾತ್ರಿ ಪಾಂಪೋರ್ ಪ್ರದೇಶದ ಸಂಬೂರಾದಲ್ಲಿ ಸಬ್ ಇನ್ಸ್‌ಪೆಕ್ಟರ್ ಫಾರೂಕ್ ಅಹ್ಮದ್ ಮಿರ್ ಮೇಲೆ ಹಲ್ಲೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.