ಕರ್ನಾಟಕ

karnataka

ETV Bharat / bharat

ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣ: ಹೈಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಪೊಲೀಸರು - ಕಾಂಗ್ರೆಸ್ ಸಂಸದ ಶಶಿ ತರೂರ್

ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಹೈಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದು,ನ್ಯಾಯಾಲಯವು 2023ರ ಫೆಬ್ರವರಿ 7ರಂದು ಪ್ರಕರಣದ ವಿಚಾರಣೆ ನಡೆಸಲಿದೆ.

police-reached-delhi-high-court-filed-review-petition-against-shashi-tharoor
ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣ : ಹೈಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಪೊಲೀಸರು

By

Published : Dec 1, 2022, 9:09 PM IST

ನವದೆಹಲಿ : ಕಾಂಗ್ರೆಸ್ ಸಂಸದ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಹೈಕೋರ್ಟ್‌ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ.

ಸುನಂದಾ ಪುಷ್ಕರ್​ ಸಾವಿನ ಪ್ರಕರಣ ಸಂಬಂಧ 2021ರ ಆಗಸ್ಟ್​​ನಲ್ಲಿ ರೋಸ್ ಅವೆನ್ಯೂ ನ್ಯಾಯಾಲಯವು ತರೂರ್ ಅವರನ್ನು ಖುಲಾಸೆಗೊಳಿಸಿತ್ತು. ಇದೀಗ 15 ತಿಂಗಳ ನಂತರ ದೆಹಲಿ ಪೊಲೀಸರು ಈ ನಿರ್ಧಾರದ ವಿರುದ್ಧ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣ ಸಂಬಂಧ ಶಶಿ ತರೂರ್ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ಹಿರಿಯ ವಕೀಲ ವಿಕಾಸ್ ಪಹ್ವಾ, ದೆಹಲಿಯಿಂದ ಸಲ್ಲಿಸಲಾಗುತ್ತಿರುವ ಮರುಪರಿಶೀಲನಾ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದಾರೆ. ಈ ಆಕ್ಷೇಪದ ಹಿನ್ನೆಲೆ ಹೈಕೋರ್ಟ್ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.

ಇನ್ನು ದೆಹಲಿ ಪೊಲೀಸರು ಮರುಪರಿಶೀಲನಾ ಅರ್ಜಿಯನ್ನು ತಡವಾಗಿ ಸಲ್ಲಿಸಿದ್ದಕ್ಕೆ ನ್ಯಾಯಾಲಯಕ್ಕೆ ಕ್ಷಮಾಪಣೆ ಅರ್ಜಿಯನ್ನೂ ಸಲ್ಲಿಸಿದ್ದಾರೆ. ನ್ಯಾಯಾಲಯವು 2023ರ ಫೆಬ್ರವರಿ 7ಕ್ಕೆ ವಿಚಾರಣೆಯನ್ನು ನಿಗದಿಪಡಿಸಿದೆ.

ಪ್ರಕರಣ ಹಿನ್ನೆಲೆ: ಶಶಿ ತರೂರ್​ ಅವರ ಪತ್ನಿ ಸುನಂದಾ ಪುಷ್ಕರ್​​ 2014ರ ಜನವರಿ 17 ರಂದು ದೆಹಲಿಯ ಐಷಾರಾಮಿ ಹೋಟೆಲ್‌ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಈ ಸಂಬಂಧ ದೆಹಲಿ ಪೊಲೀಸರು 2015ರ ಜನವರಿ 1 ರಂದು ಕೊಲೆಯ ಆರೋಪದ ಮೇಲೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಬಳಿಕ ಶಶಿ ತರೂರ್ ವಿರುದ್ಧ ಐಪಿಸಿ ಸೆಕ್ಷನ್ 498ಎ ಅಡಿ ಪ್ರಕರಣ ದಾಖಲಿಸಲಾಗಿತ್ತು.

ಆಗಸ್ಟ್ 2021 ರಲ್ಲಿ, ರೌಸ್ ಅವೆನ್ಯೂದಲ್ಲಿನ ವಿಚಾರಣಾ ನ್ಯಾಯಾಲಯವು ತರೂರ್ ಅವರನ್ನು ಪತ್ನಿಗೆ ಆತ್ಮಹತ್ಯೆ ಪ್ರಚೋದನೆ ನೀಡಿದ ಆರೋಪದಿಂದ ಖುಲಾಸೆಗೊಳಿಸಿತು. ಸಂಸದರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ವಿಚಾರಣಾ ನ್ಯಾಯಾಲಯ ಹೇಳಿತ್ತು.

ಇದನ್ನೂ ಓದಿ :ಸುನಂದಾ ಪುಷ್ಕರ್ ಸಾವು ಪ್ರಕರಣ: ಶಶಿ ತರೂರ್‌ಗೆ ದೆಹಲಿ ಕೋರ್ಟ್‌ನಿಂದ ಕ್ಲೀನ್‌ಚಿಟ್

ABOUT THE AUTHOR

...view details