ಎರ್ನಾಕುಲಂ(ಕೇರಳ): ನಟಿ ಮಂಜು ವಾರಿಯರ್ ದೂರಿನ ಮೇರೆಗೆ ಯುವಕನೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಮಂಜು ವಾರಿಯರ್ಗೆ ಅವಹೇಳನಕಾರಿ ಪೋಸ್ಟ್ಗಳು ಮತ್ತು ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಕ್ಕಾಗಿ ಯುವಕನ ವಿರುದ್ಧ ಕೊಚ್ಚಿ ಎಳಮಕ್ಕರ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಆರೋಪಿ ಯುವಕನ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ. ದೂರು ದಾಖಲಾದ ನಂತರ ಪೊಲೀಸರು ಮಂಜು ವಾರಿಯರ್ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಐಟಿ ಕಾಯ್ದೆಯಡಿ ಸಾಮಾಜಿಕ ಜಾಲತಾಣಗಳ ಮೂಲಕ ಮಾನನಷ್ಟ ಮತ್ತು ಬೆದರಿಕೆ ಹಾಕಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ. ಆ ಯುವಕ ಹಲವು ದಿನಗಳಿಂದ ತನಗೆ ಕಿರುಕುಳ ನೀಡುತ್ತಿದ್ದಾನೆ ಎಂದು ಮಂಜು ವಾರಿಯರ್ ದೂರಿನಲ್ಲಿ ಆರೋಪಿಸಿದ್ದಾರೆ.