ಚೆನ್ನೈ(ತಮಿಳುನಾಡು):ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯೊಂದಿಗೆ ಪ್ರೀತಿ-ಪ್ರೇಮದ ಆಟವಾಡಿದ ಶಿಕ್ಷಯೋರ್ವಳು ಬಳಿಕ ಆತನಿಗೆ ಪತ್ನಿಯೂ ಆಗಿದ್ದಾಳೆ. ಬಾಲಕನೊಂದಿಗೆ ವಿವಾಹವಾಗಿದ್ದ ಶಿಕ್ಷಕಿಗೆ ಇದೀಗ ಸಂಕಷ್ಟ ಎದುರಾಗಿದೆ. ಆಕೆ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ. ತಮಿಳುನಾಡಿನ ಅರಿಯಾಲೂರು ಜಿಲ್ಲೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.
ಮದುವೆ ವಿಷಯ ತಿಳಿದ ಬಾಲಕನ ಪೋಷಕರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಅರಿಯಾಲೂರು ಪೊಲೀಸರು ಶಿಕ್ಷಕಿಯನ್ನು ಬಂಧಿಸಿದ್ದಾರೆ.
ಮಜವರಾಯನಲ್ಲೂರು ಗ್ರಾಮದ 17 ವರ್ಷದ ಬಾಲಕ ಹತ್ತನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಶಾಲೆಯಲ್ಲಿ ಪಾಠ ಮಾಡುತ್ತಿದ್ದ ಶಿಕ್ಷಕಿ ಮೇಲೆ ಪ್ರೇಮಾಂಕುರವಾಗಿ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಬಳಿಕ ಮದುವೆ ಆಗಬೇಕೆಂದು ನಿರ್ಧರಿಸಿದ್ದರು.